ಮಂಗಳೂರು ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ ಮಂಗಳೂರು ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿದ್ದು ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಮನವಿ ಮಾಡಿತ್ತು, ದಾಂಡಿಯಾ ನೃತ್ಯ ಉತ್ತರಭಾರತದ ಪವಿತ್ರ ಧಾರ್ಮಿಕ ಕಾರ್ಯಕ್ರಮ ಈ ಕಾರ್ಯಕ್ರಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲಾಗುತ್ತೆ, ಅಸಭ್ಯವಾಗಿ ವರ್ತಿಸಲಾಗುತ್ತೆ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು ಇನ್ನು ವಿಶ್ವ ಹಿಂದೂ ಪರಿಷತ್ ಮನವಿ ಬೆನ್ನಲ್ಲೇ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತುರ್ತು ಸಭೆ ಕರೆದಿದ್ದಾರೆ.
ಇನ್ನು ಸಭೆಯ ಬಳಿಕ ಷರತ್ತುಬದ್ಧವಾಗಿ ದಾಂಡಿಯಾ ಇವೆಂಟ್ಸ್ ಆಚರಿಸಲು ಅನುಮತಿ ನೀಡಲಾಗಿದೆ ಯಾವುದೇ ವಿವಾದಾಸ್ಪದ ಘಟನೆಗಳಿಗೆ ಅವಕಾಶ ನೀಡದಂತೆ ಕಾರ್ಯಕ್ರಮ ನಡೆಸಲು ಆಯೋಜಕರಿಗೆ ಸೂಚನೆ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಅಗ್ರಹಿಸಿದ್ದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅನುಮತಿ ನೀಡಿದ್ದೇಯಾದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಹಿಂದೂ ಮುಖಂಡ ಪ್ರದೀಪ್ ಸರಿಪಲ್ಲ ಹಿಂದೂ ಸಂಘಟನೆಗಳ ಎಚ್ಚರಿಕೆ ಹಿನ್ನಲೆ ಕಾರ್ಯಕ್ರಮಗಳಿಗೆ ಪೊಲೀಸ್ ಭದ್ರತೆ ಒಗಗಿಸುವ ಸಾಧ್ಯತೆ ಇದೆ.