• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಬಜೆಟ್​ ಗೆ ಮುನ್ನವೇ ವಿರೋಧ ಪಕ್ಷಗಳಿಂದ ಪ್ರತಿಭಟನೆ..!

ಕೃಷ್ಣ ಮಣಿ by ಕೃಷ್ಣ ಮಣಿ
March 6, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ
0
ರಾಜ್ಯ ಬಜೆಟ್​ ಗೆ ಮುನ್ನವೇ ವಿರೋಧ ಪಕ್ಷಗಳಿಂದ ಪ್ರತಿಭಟನೆ..!
Share on WhatsAppShare on FacebookShare on Telegram

ಶುಕ್ರವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಾರಿಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್​ ಮಂಡನೆಗೂ ಮುನ್ನವೇ ಬಿಜೆಪಿ-ಜೆಡಿಎಸ್​ ನಾಯಕರು ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಇದಕ್ಕೂ ಮೊದಲು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ್​ ಮಾತನಾಡಿದ್ದು, ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಟೀಕೆ ವ್ಯಕ್ತಪಡಿಸಿದ್ದಾರೆ.

ADVERTISEMENT

ಶಾಸಕರಿಗೆ ಅನುದಾನ ಕೊರತೆ ಬಗ್ಗೆ ಸದನದಲ್ಲಿ ಆರ್ ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದಲ್ಲಿ ನನ್ನ ಕ್ಷೇತ್ರಕ್ಕೆ ಹತ್ತು ಕೋಟಿ ಅನುದಾನ ಕೊಡಲಾಗಿದೆ. ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಬೈರತಿ ಸುರೇಶ್ ಗೆ 100 ಕೋಟಿ ಅನುದಾನ ಕೊಡಲಾಗಿತ್ತು. ಅನುದಾನದ ಕೊಡುವ ಬಗ್ಗೆ ಸಿದ್ದರಾಮಯ್ಯ ಕರೆ ಮಾಡಿದ್ದರು. ಆದರೆ ನನಗೆ ಈ ಸರ್ಕಾರದ ಅವಧಿಯಲ್ಲಿ 10 ಕೋಟಿ ನೀಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ನನಗೆ ಮಾತ್ರವಲ್ಲ ಯಾವುದೇ ಶಾಸಕರಿಗೂ ಈ ಸರ್ಕಾರದಲ್ಲಿ ಅನುದಾನ ಸಿಗ್ತಿಲ್ಲ. ನಮ್ಮ ರಸ್ತೆಗಳು ಹದಗೆಟ್ಟಿವೆ, ಇವಾಗ ಮಳೆಗಾಲ ಬರ್ತಿದೆ, ಮಳೆಗೂ ಮುನ್ನ ಡಾಂಬರೀಕರಣ ಮಾಡಬೇಕಿದೆ. ಬ್ರ್ಯಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರು ಆಗಿದೆ. ಬೆಂಗಳೂರು ಗಾರ್ಬೆಜ್ ಬೆಂಗಳೂರು ಆಗಿದೆ ಎಂದಿದ್ದಾರೆ ಆರ್​ ಅಶೋಕ್.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಆರ್ ಅಶೋಕ್ ಮಾತನಾಡಿ, ಕನ್ನಡ ಕೆಲಸಕ್ಕೂ ಕಾಸಿನ ಕೊರತೆ ಇದೆ. ನಮ್ಮ ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 431 ಕೊಡಲಾಗಿತ್ತು. ಇವಾಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 255 ಕೊಡಲಾಗಿದೆ. ಕನ್ನಡ ಸಮ್ಮೇಳನಕ್ಕೆ 30 ಕೋಟಿ ಬದಲಾಗಿ 10 ಕೋಟಿ ಕೊಡಲಾಗ್ತಿದೆ. ನಾಟಕಗಳಿಗೆ 35,000 ಮೊತ್ತದ ಕ್ರಿಯಾ ಯೋಜನೆಗೆ ಹಣ ಇಲ್ಲ. ಕಲಾವಿದರಿಗೆ, ಸಂಘಗಳಿಗೆ ನೀಡುತ್ತಿದ್ದ ಧನ ಸಹಾಯ 29 ಕೋಟಿಯಿಂದ 10 ಕೋಟಿಗೆ ಇಳಿಕೆ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

Pramod Mutalik on D.K.Shiakumar: DCM ಡಿಕೆಶಿ ಬಗ್ಗೆ ಪ್ರಮೋದ್ ಮುತಾಲಿಕ್ ಖಡಕ್ ವಾಗ್ದಾಳಿ #pratidhvani

ರಂಗಮಂದಿರಗಳಿಗೆ ಸರ್ಕಾರ ಹಣ ಕೊಡುತ್ತಿಲ್ಲ. ಕಲಾವಿಧರ ಪಿಂಚಣಿಗೆ ಅರ್ಜಿ ಆಹ್ವಾನ ಇಲ್ಲ. ಕನ್ನಡದ ಕೆಲಸಕ್ಕೂ ಈ ಸರ್ಕಾರದಲ್ಲಿ ಹಣ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಶುಕ್ರವಾರ ಬಜೆಟ್ ಮಂಡನೆಗೂ ಮುನ್ನವೇ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಪ್ಲಾನ್ ಮಾಡಿದೆ, ಸರ್ಕಾರದ ಶೂನ್ಯ ಸಾಧನೆ,‌ ವೈಫಲ್ಯಗಳ ವಿರುದ್ಧ ಪ್ರತಿಭಟನೆ ಮಾಡಲಾಗುತ್ತದೆ ಎನ್ನಲಾಗಿದೆ.

ವಿಧಾನಸೌಧದ ಆವರಣದಲ್ಲಿರುವ ಗಾಂಧಿಪ್ರತಿಮೆ ಮುಂಭಾಗ ಬಿಜೆಪಿ – ಜೆಡಿ ಎಸ್ ಶಾಸಕರು ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದು, ಬಜೆಟ್ ‌ಮಂಡನೆಗೂ ಮುನ್ನವೇ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ- ಜೆಡಿಎಸ್ ನಿರ್ಧಾರ ಮಾಡಿವೆ. ಬಿ.ವೈ‌ ವಿಜಯೇಂದ್ರ, ಆರ್.ಅಶೋಕ್, ‌ಸುರೇಶ್‌ಬಾಬು‌ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಮಾಡಲಾಗುತ್ತದೆ.

Tags: adani row: opposition parties protest in parliamentbjp vs opposition partiesmaharashtra opposition leaders stage protestmaharashtra opposition leaders stage protest against state budgetmaharashtra opposition leaders stage protest outside vidhan bhawanopposition mps protestopposition parties marchopposition protestopposition protest against caaopposition protest in maharashtra
Previous Post

ಹುಬ್ಬಳ್ಳಿ ಗಲಭೆ ಕೇಸ್​.. ಸರ್ಕಾರದ ನಿರ್ಧಾರ ಪ್ರಶ್ನಿಸಿ PIL ಸಲ್ಲಿಕೆ..

Next Post

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post

ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada