ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತರಲು ಸಮಯ ನೀಡಿ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ..

ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ, ಆದ್ರೆ ಐದು ಗ್ಯಾರಂಟಿಗಳನ್ನ ಜಾರಿಗೆ ತರಲು ಕಾಂಗ್ರೆಸ್ ತಡಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ. ಮತ್ತೊಂದೆಡೆ, ಪ್ರತಿಪಕ್ಷಗಳು ಯಾವುದೇ ಗೊಂದಲವನ್ನು ಸೃಷ್ಟಿಸಬಾರದು, ಕಾಂಗ್ರೆಸ್ ಸರ್ಕಾರ ತನ್ನ ಕೆಲಸವನ್ನು ಮಾಡಲು ಬಿಡಬೇಕು ಎಂದು ಹೇಳುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದಾರೆ.


ಈ ಯೋಜನೆಗಳನ್ನು ಹೊರತರುವ ಮೊದಲು ಕೆಲವು ನಿಯಮ ಹಾಗೂ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ನಾವು ಶಾಂತವಾಗಿರೋಣ ಮತ್ತು ಅವರು ನೀಡಿದ ಭರವಸೆಗಳನ್ನು ಕಾರ್ಯಗತಗೊಳಿಸಲು ಅವಕಾಶ ಮಾಡಿಕೊಡೋಣ ಎಂದು ಕರೆ ನೀಡಿದ್ದಾರೆ.