• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ

ಪ್ರತಿಧ್ವನಿ by ಪ್ರತಿಧ್ವನಿ
September 19, 2026
in Top Story
0
ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ತೀರ್ಥಹಳ್ಳಿಯಲ್ಲಿ ರೈತರು, ತಜ್ಞರು, ಜನಪ್ರತಿನಿಧಿಗಳ ಒಕ್ಕೊರಲ ಅಭಿಪ್ರಾಯ
Share on WhatsAppShare on FacebookShare on Telegram

ಕಸ್ತೂರಿ ರಂಗನ್ ವರದಿ ಜಾರಿ ವಿಚಾರವಾಗಿ ಮಲೆನಾಡಿನ ಜನರ ಆತಂಕ ಹಾಗೂ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ತೀರ್ಥಹಳ್ಳಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಂವಾದದಲ್ಲಿ ವರದಿ ಜಾರಿಗೆ ವಿರೋಧ ವ್ಯಕ್ತವಾಯಿತು. ರೈತರು, ತಜ್ಞರು, ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.ಮಲೆನಾಡಿನ ಜನರ ಭೂಮಿ, ವಾಸಸ್ಥಳ ಹಾಗೂ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರಬಹುದೆಂಬ ಆತಂಕವನ್ನು ಹಲವರು ವ್ಯಕ್ತಪಡಿಸಿದರು.

ADVERTISEMENT

ಈಗಾಗಲೇ ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಹಲವು ಕಾಯ್ದೆಗಳು ಜಾರಿಯಲ್ಲಿದ್ದು, ಕಸ್ತೂರಿ ರಂಗನ್ ವರದಿ ಜಾರಿಯಾದರೆ ಮಲೆನಾಡಿನ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಶಿವಮೊಗ್ಗ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ್ ಹೆಗಡೆ ಹೇಳಿದರು.ವರದಿಯಲ್ಲಿ ಆಸ್ತಿ ಹಕ್ಕಿಗೆ ತೊಂದರೆಯಾಗುವುದಿಲ್ಲ ಎಂದು ಹೇಳಲಾಗಿದ್ದರೂ, ಬಗರ್‌ಹುಕುಂ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಿ ಹೊಂದಿರುವವರಿಗೆ ಮುಂದಿನ ದಿನಗಳಲ್ಲಿ ಸಮಸ್ಯೆಯಾಗುವ ಆತಂಕವಿದೆ. ಈ ಕುರಿತು ಸ್ಪಷ್ಟತೆ ಅಗತ್ಯವಿದೆ ಎಂದು ಅವರು ಹೇಳಿದರು.

Kasturirangan Report : ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ನಾಯಕ.? | #pratidhvani

ಸಚಿವ ಮಧು ಬಂಗಾರಪ್ಪ ಮಾತನಾಡಿ, ಬಗರ್‌ಹುಕುಂ ಹಾಗೂ ‘ಉಳುವವನೇ ಭೂಮಿಯ ಒಡೆಯ’ ಯೋಜನೆಗಳ ಮೂಲಕ ಜನರಿಗೆ ಭೂಮಿ ಒದಗಿಸಲಾಗಿದೆ. ಇದೀಗ ಅದೇ ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಮಲೆನಾಡಿನ ಜನರು ಅರಣ್ಯವನ್ನು ಉಳಿಸಿಕೊಂಡು ಬಂದಿದ್ದಾರೆ. ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಆಕ್ಷೇಪ ವ್ಯಕ್ತಪಡಿಸುವುದರ ಜೊತೆಗೆ, ಈ ಭಾಗದ ರೈತರ ಭೂಮಿಯ ಸಂಪೂರ್ಣ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಅಗತ್ಯವಿದೆ. ಸರ್ವೇ ನಂಬರ್, ವಾಸದ ಜಾಗ ಸೇರಿದಂತೆ ಪ್ರತಿಯೊಂದು ವಿವರವನ್ನು ದಾಖಲಿಸಬೇಕು ಎಂದು ಸಲಹೆ ನೀಡಿದರು.

ಮಾಜಿ ಶಾಸಕ ಕಿಮ್ಮನೆ ರತ್ನಾಕರ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಕರ್ನಾಟಕದ ಎಲ್ಲ ಸಂಸದರು ಕಸ್ತೂರಿ ರಂಗನ್ ವರದಿ ಕುರಿತು ಒಗ್ಗಟ್ಟಿನ ನಿಲುವು ತಾಳಬೇಕು ಎಂದು ಸಲಹೆ ನೀಡಿದರು.ಕೃಷಿ ತಜ್ಞ ಕಮ್ಮರಡಿ ಪ್ರಕಾಶ್ ಮಾತನಾಡಿ, ಕಸ್ತೂರಿ ರಂಗನ್ ವರದಿ ಕುರಿತು ಮೂರು ದಿನಗಳ ವಿಶೇಷ ಅಧಿವೇಶನ ನಡೆಸುತ್ತಿರುವುದು ಮಹತ್ವದ ಹೆಜ್ಜೆಯಾಗಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಆರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಚರ್ಚೆ ನಡೆಸಿ ಒಮ್ಮತದ ಅಭಿಪ್ರಾಯ ರೂಪಿಸಬೇಕು. ಬಡ ರೈತರ ಹಿತ ಕಾಪಾಡಬೇಕು ಎಂದು ಹೇಳಿದರು.

HD Kumaraswamy on Siddaramaiah : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಕುಮಾರಣ್ಣ ಏನಂದ್ರು..! #siddaramaiah

ರೈತ ಮುಖಂಡ ರಾಜೇಂದ್ರ ಕಮ್ಮಳಿಗೆರೆ ಮಾತನಾಡಿ, ವರದಿ ಜಾರಿಯಿಂದ ಪರಿಸರ ಸಂರಕ್ಷಣೆಯ ಉದ್ದೇಶ ಈಡೇರುವುದಿಲ್ಲ ಎಂಬುದು ತಮ್ಮ ಅಭಿಪ್ರಾಯವಾಗಿದೆ. ಮಲೆನಾಡಿನ ಜನರ ಆತಂಕವನ್ನು ಕೇಂದ್ರ ಸರ್ಕಾರದ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಹೇಳಿದರು.ಶಾಸಕ ಆರಗ ಜ್ಞಾನೇಂದ್ರ ಅವರು ಕೂಡ ವರದಿ ಜಾರಿಯಿಂದ ಮಲೆನಾಡಿನ ಜನರಲ್ಲಿ ಆತಂಕ ಉಂಟಾಗಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ಗೌಡ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡಿನ ಜನರೊಂದಿಗೆ ನೇರವಾಗಿ ಸಂವಾದ ನಡೆಸಿರುವುದು ಜನರ ಆತಂಕಗಳನ್ನು ಸರ್ಕಾರದ ಗಮನಕ್ಕೆ ತರಲು ಸಹಕಾರಿಯಾಗಿದೆ ಎಂದು ಹೇಳಿದರು.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಕುಳಿತು ಚರ್ಚೆ ನಡೆಸುವುದಕ್ಕಿಂತ ಸ್ಥಳೀಯರೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅಭಿಪ್ರಾಯಗಳನ್ನು ಆಲಿಸುವ ಉದ್ದೇಶದಿಂದ ತೀರ್ಥಹಳ್ಳಿಗೆ ಬಂದಿರುವುದಾಗಿ ತಿಳಿಸಿದ್ದಾರೆ. ರೈತರ ಭೂಮಿ ಹಾಗೂ ಬದುಕಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮಲೆನಾಡಿನ ಭಾಗದಲ್ಲಿ ಈಗಾಗಲೇ ಕಾಡುಕೋಣ, ಆನೆ, ಕೋತಿ, ಕೊಳೆರೋಗ, ಎಲೆಚುಕ್ಕೆ ರೋಗ ಸೇರಿದಂತೆ ಹಲವು ಸಮಸ್ಯೆಗಳಿವೆ. ಇದರ ಜೊತೆಗೆ ಕಸ್ತೂರಿ ರಂಗನ್ ವರದಿ ಕುರಿತು ಆತಂಕವೂ ಎದುರಾಗಿದೆ. ತಮ್ಮ ಭಾಗದ ಹಲವು ಗ್ರಾಮಗಳು ವರದಿ ವ್ಯಾಪ್ತಿಗೆ ಒಳಪಡುತ್ತಿರುವ ಹಿನ್ನೆಲೆಯಲ್ಲಿ ಜನರ ಆತಂಕವನ್ನು ಒಟ್ಟಾಗಿ ದೂರ ಮಾಡಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಬರುವ ಪ್ರದೇಶಗಳ ಕುರಿತು ಕೇರಳ ಮಾದರಿಯಲ್ಲಿ ಭೌತಿಕ ಸಮೀಕ್ಷೆ ನಡೆಸಬೇಕು. ರೈತರ ವಾಸಸ್ಥಳ, ಕೃಷಿ ಭೂಮಿ, ಸರ್ವೇ ನಂಬರ್ ಹಾಗೂ ಸಂಬಂಧಿತ ದಾಖಲೆಗಳ ಸಮಗ್ರ ಮಾಹಿತಿಯನ್ನು ಸಂಗ್ರಹಿಸಿ ಸರ್ಕಾರದ ಮೂಲಕ ಕೇಂದ್ರಕ್ಕೆ ಸಲ್ಲಿಸಬೇಕು ಎಂಬ ಸಲಹೆಗಳೂ ವ್ಯಕ್ತವಾದವು. ಈ ರೀತಿಯ ಭೌತಿಕ ಸಮೀಕ್ಷೆ ನಡೆಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ತಿಳಿಸಿದ್ದಾರೆ.

 

Tags: D K ShivakumarEnvironmental PolicyFarmers IssuesFarmers protestKarnataka Governmentkarnataka newsKasturirangan CommitteeKasturirangan ReportKasturirangan Report KarnatakamalnadMalnad FarmersShivamoggaThirthahalliThirthahalli NewsWestern GhatsWestern Ghats Conservation
Previous Post

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

Related Posts

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ
Top Story

ಮಿನಿಮಮ್ ಬ್ಯಾಲೆನ್ಸ್ ಟೆನ್ಷನ್ ಬೇಡ; ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯವಿಲ್ಲ

by ಪ್ರತಿಧ್ವನಿ
September 19, 2026
0

ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಸಾಧ್ಯವಾಗದೆ ಪ್ರತಿ ತಿಂಗಳು ಶುಲ್ಕ ಪಾವತಿಸುತ್ತಿದ್ದೀರಾ? ಯಾವುದೇ ಕನಿಷ್ಠ ಬ್ಯಾಲೆನ್ಸ್ ನಿಯಮವಿಲ್ಲದೆ ಬ್ಯಾಂಕಿಂಗ್ ಸೇವೆ ಪಡೆಯಲು ಬಯಸುವವರಿಗೆ ಆರ್‌ಬಿಐ ನಿಯಮಗಳ...

Read moreDetails
ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

ಪ್ರಧಾನಿ ಮೋದಿ ವಿರುದ್ಧ ಬಿ.ಕೆ. ಹರಿಪ್ರಸಾದ್ ಹೇಳಿಕೆ; ಟ್ರಿಬಲ್ ತಲಾಖ್ ಕುರಿತು ವಿವಾದಾತ್ಮಕ ಟೀಕೆ

September 19, 2026
ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

ಬೆಂಗಳೂರಿನಲ್ಲಿ ಮನೆ ಕಟ್ಟುವವರಿಗೆ ಗುಡ್‌ನ್ಯೂಸ್ ಇಲ್ಲಿದೆ

September 19, 2026
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು : ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

September 19, 2026
ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

ರೋಜ್‌ಗಾರ್ ಮೇಳ : ಪ್ರಧಾನಿ ಮೋದಿಯಿಂದ ಇಂದು 51,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ

September 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada