ಬೆಂಗಳೂರಿನ ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡ ದಿಗಂತ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಗೋವಾ ಕಡಲತೀರದಲ್ಲಿ ಸಮ್ಮರ್ ಸಾಲ್ಟ್ ಜಂಪ್ ವೇಳೆ ದಿಂಗತ್ ಕುತ್ತಿಗೆಗೆ ಪೆಟ್ಟು ಬಿದ್ದಿತ್ತು. ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗಿತ್ತು.
ನಿನ್ನೆ 3 ಗಂಟೆ ಕಾಲ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮನೆಗೆ ತೆರಳಿದ ದಿಗಂತ್ ಅವರಿಗೆ ಮೂರು ತಿಂಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.