• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ

ಪ್ರತಿಧ್ವನಿ by ಪ್ರತಿಧ್ವನಿ
February 25, 2026
in Top Story, ಕರ್ನಾಟಕ
0
ವಿಕ್ಟೋರಿಯಾದಲ್ಲಿ ಅಂಗಾಂಗ ಕಸಿ ಯಶಸ್ವಿ: ಯುವಕನ ಅಂಗಾಂಗ ದಾನ ಮಾಡಿದ ಕುಟುಂಬ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎನ್ನುತ್ತಾರೆ. ಸಾವಿನಲ್ಲೂ ಸಾರ್ಥಕತೆ ಮೆರೆಯುವುದು ನಿಜಕ್ಕೂ ಸ್ಮರಣೀಯ. ಇಂಥ ಕಾರ್ಯವನ್ನು ಮಾಡುವಲ್ಲಿ ಮಂಡ್ಯದ ಕಸಬಾ ಹೋಬಳಿಯ ಚಿಕ್ಕ ಮಂಡ್ಯ ಗ್ರಾಮದ ಕುಟುಂಬ ಸದಸ್ಯರು ಧೈರ್ಯ ತೋರಿ, ಕೆಲವರ ಬಾಳಿಗೆ ಬೆಳಕು ತುಂಬಿದ್ದಾರೆ.

Nikhil Kumaraswamy | ನಮ್ಮ ಕುಟುಂಬ ಕೆಲಸ ಮಾಡಿದೆ.. ಯಾವುದೇ ಅನುಮಾನ ಬೇಡ ರಾಮನಗರಕ್ಕೆ ಫಿಕ್ಸ್ ಆಗಿದ್ದೀನಿ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್‌ ಸೆಂಟರ್‌ನಲ್ಲಿ ನಡೆದ ಅಂಗಾಂಗ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ಜನರಿಗೆ ಕೈಗೆಟಕುವ ದರದಲ್ಲಿ ಈ ಸೇವೆಯನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಒದಗಿಸಿದೆ.

ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್‌ ಸೂಪರಿಟೆಂಡರ್‌ ಡಾ. ದೀಪಕ್‌ ಮತ್ತು ಟ್ರಾಮಾ ಎಮರ್ಜೆನ್ಸಿ ಕೇರ್‌ ಸೆಂಟರ್ ನ ವಿಶೇಷ ಅಧಿಕಾರಿ ಡಾ. ಅಸೀಮ ಬಾನು ,ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಟ್ರಾಮ ಕೇರ್‌ ಸೆಂಟರ್‌ ಹಾಗೂ ಜೀವಸಾರ್ಥಕತೆ ತಂಡದ ಸದಸ್ಯರ ಸೇವೆ ಸ್ಮರಣೀಯ ಎಂದರು.

ನೋವಿನ ಸಮಯದಲ್ಲೂ ಸಮಾಜ ಸೇವೆ ಹಾಗೂ ಮತ್ತೊಬ್ಬರ ಬಾಳಿಗೆ ಬೆಳಗಾಗುವ ರೀತಿಯ ನಿರ್ಧಾರ ಕೈಗೊಂಡ ಕುಟುಂಬ ಸದಸ್ಯರಿಗೆ ಧನ್ಯವಾದಗಳು ಎಂದು ಡಾ. ದೀಪಕ್‌ ತಿಳಿಸಿದ್ದಾರೆ.

Shivamogga SSLC Student Death | KS Eshwarappa | ಸ್ಥಳಕ್ಕೆ ಡಿ.ಸಿ, ಎಸ್‌.ಪಿ, ಜಿಲ್ಲಾ ಮಂತ್ರಿ ಬರುವಂತೆ ಪಟ್ಟು

ಹಿನ್ನೆಲೆ ಏನು..?

ಚಿಕ್ಕಮಂಡ್ಯ ಗ್ರಾಮದ ದರ್ಶನ್‌ ಎಂಬ ಯುವಕ ಕಳೆದ ಫೆಬ್ರವರಿ 22ರಂದು ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ. ಆದರೆ ಆತುರದಲ್ಲಿ ಮನೆಗೆ ಬಂದು ರಾತ್ರಿ ಮಲಗಿದ್ದ. ಆದರೆ ಆತನ ತಲೆಗೆ ಭಾರಿ ಪೆಟ್ಟಾಗಿರುವುದು ಕಂಡು ಆಸ್ಪತ್ರೆಗೆ ಸೇರಿಸಿದರು. ಆಗ ತಲೆಯೊಳಗೆ ರಕ್ತಸ್ರಾವವಾಗಿರುವುದು ಪತ್ತೆಯಾಯಿತು.

ಕೂಡಲೇ ಆತನನ್ನು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್‌ ಸೆಂಟರ್‌ಗೆ ಕರೆದುಕೊಂಡು ಬರಲಾಯಿತು. ಹಲವಾರು ಪರೀಕ್ಷೆಗಳಿಗೆ ಒಳಪಡಿಸಿದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಎರಡು ದಿನಗಳ ನಂತರ ಪರೀಕ್ಷೆ ನಡೆಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡಾ. ಕಾವ್ಯಾ, ಡಾ. ದೀಪಕ್‌, ಡಾ. ಆಸೀಮಾ ಬಾನು ಉನ್ನತ ವೈದ್ಯರ ತಂಡ ಬ್ರೇನ್‌ ಡೆಡ್‌ ಎಂದು ಘೋಷಿಸಿತು.

ನಂತರ ಜೀವ ಸಾರ್ಥಕತೆ ಎಂಬ ತಂಡ, ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ನಂತರ, ದಿನೇಶ್‌ ಅಂಗಾಂಗ ದಾನ ಮಾಡಲು ಸಮ್ಮತಿಸಿ ಸಾರ್ಥಕತೆ ಮೆರೆದರು. ದಿನೇಶ್‌ ಅವರ ಯಕೃತ್ತು, ಮೂತ್ರಪಿಂಡ, ಹೃದಯ ನಾಳಗಳು, ಇತರೆ ಅಂಗ ಪಡೆದು ಅರ್ಹರಿಗೆ ಅಳವಡಿಸಲಾಗಿದೆ. ದಿನೇಶ್‌ ಕುಟುಂಬ ಸದಸ್ಯರ ಈ ನಿರ್ಧಾರವನ್ನು ಆಸ್ಪತ್ರೆಯ ವೈದ್ಯರು ಶ್ಲಾಘಿಸಿದ್ದಾರೆ.

Vinay kumar G B Exlusive podcast :  ಅಲ್ಲಿ ಕಾಲೆಳೆಯೋದು, ಬೆಳೆಯೋರನ್ನು ತುಳಿಯೋದೆ ಜಾಸ್ತಿ   #pratidhvani
Tags: bengaluruHealthHospitalKarnatakaOrgan transplantvictoria hospitalVictoria Hospital Bengaluru
Previous Post

ಬೆಂಗಳೂರು ನಿವಾಸಿಗಳೇ ಗಮನಿಸಿ..:ನಾಳೆ ಈ ಭಾಗಗಳಲ್ಲಿ ಕಾವೇರಿ ನೀರು ಬರಲ್ಲ..!

Next Post

ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
Next Post
ಧಾರವಾಡದಲ್ಲಿ ಆಕ್ರೋಶ: ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ, ಅರವಿಂದ ಬೆಲ್ಲದ್ ಗೆ ಬಿಜೆಪಿ ಶಾಲು ತೆಗೆಯಲು ಸೂಚನೆ 

ಡಿಜಿಟಲ್ ಚಿನ್ನ ವ್ಯವಹಾರ: ಜಾರ್ ಮೇಲೆ ಕರ್ನಾಟಕ ಸಿಐಡಿ ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada