• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047- ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ..

ಪ್ರತಿಧ್ವನಿ by ಪ್ರತಿಧ್ವನಿ
April 19, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Share on WhatsAppShare on FacebookShare on Telegram

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ ಸಮೇಳನ ವೇದಿಕೆಯಾಯಿತು. ಸುಸ್ಥಿರ ಇಂಧನ ಭವಿಷ್ಯವನ್ನು ರೂಪಿಸುವಲ್ಲಿ ಈ ಸಮ್ಮೇಳನದ ನಿರ್ಣಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ADVERTISEMENT
Podcast with Dr. Ananth Bhandary S. | Opthalmology | ನಮ್ಮ ಕಣ್ಣೂ ಶುಗರ್ ಲೆವೆಲ್ ತಿಳಿಸಿಕೊಡುತ್ತೆ..

ಕಾಮನ್‌ವೆಲ್ತ್ ಲೀಗಲ್‌ ಎಜುಕೇಷನ್‌ ಅಸೋಸಿಯೇಷನ್‌ ಮತ್ತು ಇಂಧನ ಇಲಾಖೆ ಜಂಟಿಯಾಗಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ” ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಎರಡನೇ ದಿನವಾದ ಭಾನುವಾರ ಸಮಾರೋಪ ಭಾಷಣ ಮಾಡಿದರು. ಸಾಂಪ್ರದಾಯಿಕ ಮೂಲಗಳಿಂದ ನವೀಕರಿಸಬಹುದಾದ ಮೂಲಗಳಿಗೆ ಇಂಧನ ಪರಿವರ್ತನೆಯು ಮಹತ್ವಾಕಾಂಕ್ಷೆಯಾಗಿ ಉಳಿಯದೇ, ಅನುಷ್ಠಾನಕ್ಕೆ ಸಂಘಟಿತ ಕ್ರಮವಹಿಸಬೇಕಿದೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ಸನ್ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನವು ನ್ಯಾಯಾಂಗ ಮತ್ತು ಇಂಧನ ವಲಯದ ಪ್ರಮುಖರನ್ನು ಒಟ್ಟುಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಮ್ಮೇಳನದ ಯಶಸ್ಸಿಗೆ ಕಾರಣರಾದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಿ.ಎಲ್‌.ಇ.ಎ. ಅಧ್ಯಕ್ಷರಾದ ಪ್ರೊ. ಡಾ.ಎಸ್. ಶಿವಕುಮಾರ್ ಅವರಿಗೆ ವಿಶೇಷ ಧ್ಯನವಾದಗಳು. ಅಲ್ಲದೇ, ಸಮ್ಮೇಳನದಲ್ಲಿ ಪಾಲ್ಗೊಂಡ ದೇಶ- ವಿದೇಶಗಳ ಪ್ರಮುಖ ನ್ಯಾಯಶಾಸ್ತ್ರಜ್ಞರು, ನೀತಿ ನಿರೂಪಕರು, ಉದ್ಯಮ ಹಾಗೂ ಶಿಕ್ಷಣ ತಜ್ಞರ ಕೊಡುಗೆ ಅಪಾರ ಎಂದು ಜಾರ್ಜ್‌ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ನವೀಕರಿಸಬಹುದಾದ ಇಂಧನ ವಿಸ್ತರಣೆ, ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಮತ್ತು ಮೂಲಸೌಕರ್ಯ ಬಲವರ್ಧನೆಯ ಮೂಲಕ ಕರ್ನಾಟಕ ತನ್ನ ಮುಂದಾಳತ್ವವನ್ನು ಮುಂದುವರಿಸಲಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಬೆಂಬಲಿಸಲು ಮತ್ತು ಸುಸ್ಥಿರ ಭವಿಷ್ಯವನ್ನು ಸಾಧಿಸಲು ಸಹಯೋಗದೊಂದಿಗೆ ಕೆಲಸ ಮಾಡುತ್ತೇವೆ. ಮುಖ್ಯವಾಗಿ ಕೈಗೆಟುಕುವ ದರದಲ್ಲಿ ಎಲ್ಲರಿಗೂ ಗುಣಮಟ್ಟದ ವಿದ್ಯುತ್ ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇಂಧನ ನೀತಿಯನ್ನು ರೂಪಿಸುವಲ್ಲಿ ನ್ಯಾಯಾಂಗದ ಪಾತ್ರ ನಿರ್ಣಾಯಕವಾಗಿದೆ : ಹೆಚ್.ಕೆ. ಪಾಟೀಲ್..

ಸಮ್ಮೇಳನದಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, “ಈ ಸಮ್ಮೇಳನದ ನಿರ್ಣಯಗಳು ನವೀಕರಿಸಬಹುದಾದ ಇಂಧನ ವಲಯದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿವೆ. ಇಂಧನ ನೀತಿಯನ್ನು ರೂಪಿಸುವಲ್ಲಿ ನ್ಯಾಯಾಂಗದ ಪಾತ್ರ ನಿರ್ಣಾಯಕವಾಗಿದ್ದು, ಈ ಸಮ್ಮೇಳನವು ಅದಕ್ಕೆ ವೇದಿಕೆಯನ್ನು ಒದಗಿಸಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರನ್ನು ಅಭಿನಂದಿಸಿದ್ದಾರೆ.

ಈ ವೇಳೆ ಸುಪ್ರೀಂ ಕೋರ್ಟ್ ನ್ಯಾ. ವಿಕ್ರಮ್ ನಾಥ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ; ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕಕ ಡಾ. ರಾಮ್ ಪ್ರಸಾತ್ ಮನೋಹರ್; ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್; ಮತ್ತು ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು, ನ್ಯಾಯಾಂಗ ಸದಸ್ಯರು, ನೀತಿ ನಿರೂಪಕರು ಮತ್ತು ಉದ್ಯಮ ಮುಖಂಡರು ಸಮ್ಮೇಳನದಲ್ಲಿ ಉಪಸ್ಥಿತರಿದ್ದರು.

 

“ಈ ಸಮ್ಮೇಳನವು ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಅರ್ಥಪೂರ್ಣ ಸಂವಾದಕ್ಕೆ ವೇದಿಕೆ ಕಲ್ಪಿಸಿತು.ಭಾರತದ ಇಂಧನ ಪರಿವರ್ತನೆಗೆ ಸಾಂಸ್ಥಿಕ ಸಹಯೋಗವು ನಿರ್ಣಾಯಕವಾಗಿರುತ್ತದೆ.”

– ಡಾ. ಶಾಲಿನಿ ರಜನೀಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ

“2047ರ ವೇಳೆಗೆ ಭಾರತದ ಇಂಧನ ಬೇಡಿಕೆ ಸುಮಾರು 4 ಪಟ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ನವೀಕರಿಸಬಹುದಾದ ಇಂಧನದ ಬಳಕೆಗೆ ಒತ್ತು ನೀಡುವುದೇ ಇದಕ್ಕೆ ಇರುವ ಪ್ರಮುಖ ಪರಿಹಾರ. ಇಂಧನ ಭದ್ರತೆಗಾಗಿ ಇಂಧನ ಸಂಗ್ರಹಣಾ ವ್ಯವಸ್ಥೆಗಳು ಮತ್ತು ಸುಧಾರಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಅನಿವಾರ್ಯ. ನ್ಯಾಯಾಂಗ, ಸರ್ಕಾರ ಮತ್ತು ಉದ್ಯಮಗಳ ನಡುವಿನ ಸಹಕಾರ ಈ ನಿಟ್ಟಿನಲ್ಲಿ ನಿರ್ಣಾಯಕವಾಗುತ್ತದೆ”.

– ಗೌರವ್ ಗುಪ್ತ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ

Tags: BescomCJICJI SuryakantCM Siddaramaiahcongress karnatakaDK Shivakumargaurav guptaH K PatilHESCOMInternational Sustatinable Energy SummitK J GeorgeKarnataka GovermentPower DepartmentPower ministerPratidhvanisustainable energy
Previous Post

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

Related Posts

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..
Top Story

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

by ಪ್ರತಿಧ್ವನಿ
April 19, 2026
0

ನವದೆಹಲಿ : ಮೊದಲು ಸಂವಿಧಾನ ತಿದ್ದುಪಡಿ ಮಸೂದೆಗಳ ಬಗ್ಗೆ ಒಪ್ಪಿಗೆ ನೀಡಿದ್ದ ಆ ಪಕ್ಷವು ನಂತರ ಯುಟರ್ನ್‌ ಹೊಡೆಯಿತು. ಇದರಿಂದ ದಕ್ಷಿಣ ರಾಜ್ಯಗಳಿಗೆ ಸಿಕ್ಕಿದ್ದ ಬಂಗಾರದಂಥ ಅವಕಾಶ...

Read moreDetails
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada