ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೌಕರ್ಯವನ್ನು ಒದಗಿಸುತ್ತಿರುವ ಶಕ್ತಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಮಹಿಳೆಯರ ಗೊಂದಲವನ್ನು ನಿವಾರಿಸಿದೆ.
![](https://pratidhvani.com/wp-content/uploads/2023/06/2023-06-12-4-1.jpg)
ಗುರುತಿನ ಚೀಟಿ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ವಾಹಕರು ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿತ್ತು . ಹೀಗಾಗಿ ಇದೀಗ ಈ ಗೊಂದಲಗಳಿಗೆ ಸಾರಿಗೆ ಇಲಾಖೆ ತೆರೆ ಎಳೆದಿದ್ದು ಇನ್ಮೇಲೆ ಒರಿಜಿನಲ್ ಐಡಿ ಬದಲಾಗಿ ನಕಲು ಪ್ರತಿಯನ್ನು ನೀಡಬಹುದು ಎಂದು ಹೇಳಿದ್ದಾರೆ.
ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಝೆರಾಕ್ಸ್ ಪ್ರತಿಯನ್ನು ಕೊಂಡೊಯ್ಯಬಹುದು ಎಂದು ಸಾರಿಗೆ ಇಲಾಖೆ ಹೇಳಿದ್ದು ಇದರಿಂದ ಮಹಿಳಾ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಂತಾಗಿದೆ. ಭಾನುವಾರದಿಂದ ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12ಗಂಟೆವರೆಗೆ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ.