• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Energy ವಿದ್ಯುತ್‌ ಉತ್ಪಾದನೆಯಲ್ಲಿ ರಾಜ್ಯವನ್ನು ದೇಶದಲ್ಲೇ ನಂ.1 ಮಾಡುವ ಗುರಿ ಇಂಧನ ಸಚಿವ ಕೆ.ಜೆ.ಜಾರ್ಜ್‌

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Energy ವಿದ್ಯುತ್‌ ಉತ್ಪಾದನೆಯಲ್ಲಿ ರಾಜ್ಯವನ್ನು ದೇಶದಲ್ಲೇ ನಂ.1 ಮಾಡುವ ಗುರಿ ಇಂಧನ ಸಚಿವ ಕೆ.ಜೆ.ಜಾರ್ಜ್‌
Share on WhatsAppShare on FacebookShare on Telegram

ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ನಂ. 1 ಮಾಡುವ ಗುರಿ ನಮ್ಮ ಸರ್ಕಾರದ್ದು. ಈ ನಿಟ್ಟಿನಲ್ಲಿ ಜಲ ವಿದ್ಯುತ್ ಸೇರಿದಂತೆ ಎಲ್ಲಾ ರೀತಿಯ ಇಂಧನ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರದ ಕ್ರಮಗಳಿಂದಾಗಿ ಪ್ರಸ್ತುತ ರಾಜ್ಯಕ್ಕೆ ಬೇಕಾದ ವಿದ್ಯುತ್ ಉತ್ಪಾದಿಸುವುದರ ಜತೆಗೆ ವಿದ್ಯುತ್ತನ್ನು ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಿದ್ದೇವೆ,”ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳದ್ದಾರೆ.

ADVERTISEMENT

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು, “ವಿದ್ಯುತ್ ಉತ್ಪಾದನೆ ಒತ್ತು ನೀಡಿ, ಹೊರ ರಾಜ್ಯಗಳಿಗೆ ಮಾರಾಟ ಮಾಡುವ ಹಂತಕ್ಕೆ ತಲುಪಲು ಕಾರಣರಾದ ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್‌ ಮಾರಾಟವಾಗಿದೆ,”ಎಂದಿದ್ದಾರೆ.

“ವಿದ್ಯುತ್‌ ಉತ್ಪಾದನೆ ಜತೆಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಸಬ್ ಸ್ಟೇಷನ್ ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಭೂಮಿ ಗುರುತಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಾಸಕರ ನೆರವು ಪಡೆದು ಅದನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು. ಭೂಮಿಯ ಮಾಲೀಕರಿಗೆ ಸೂಕ್ತ ಪರಿಹಾರ ನೀಡಲಾಗುವುದು,” ಎಂದು ಜಾರ್ಜ್ ಹೇಳಿದ್ದಾರೆ.

“ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇನ್ನೂ ಇರುವ ಕಬ್ಬಿಣ ಮತ್ತು ಮರದ ವಿದ್ಯುತ್ ಕಂಬಗಳನ್ನು ತಕ್ಷಣ ಬದಲಾಯಿಸಿ ಸಿಮೆಂಟ್ ಕಂಬಗಳನ್ನು ಅಳವಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕಿದೆ. ಜತೆಗೆ, ವಿದ್ಯುತ್ ತಂತಿ, ಕಂಬಗಳು ಸೇರಿದಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ಅಗತ್ಯವಿರುವ ಎಲ್ಲಾ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಸಚಿವರು ಸೂಚಿಸಿದರು.

ಪ್ರತಿ ಜಿಲ್ಲೆಯಲ್ಲೂ ಪ್ರಗತಿ ಪರಿಶೀಲನೆ, ಪ್ರತಿ ಜಿಲ್ಲೆಯಲ್ಲಿ ಕಾಲ ಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವ ಮೂಲಕ ಇಂಧನ ಇಲಾಖೆಗೆ ಹೊಸ ಕಾಯಕಲ್ಪ ನೀಡಲಾಗುವುದು. ಒಂದು ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಮುಂದಿನ ಸಭೆಯೊಳಗೆ ಬಗೆಹರಿಸಬೇಕು. ಒಂದೇ ಸಮಸ್ಯೆ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು,” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು, ಈ ವಿಚಾರದಲ್ಲಿ ಸ್ಥಳೀಯ ಶಾಸಕರ ಸಲಹೆ ಪಡೆದು ಕೆಲಸ ಮಾಡಬೇಕು ಎಂದು ತಿಳಿಸಿದರು.

  • ಸೋಲಾರ್ ಪಂಪ್ ಸೆಟ್‌ಗೆ ಆದ್ಯತೆ
    “ವಿದ್ಯುತ್ ಸಮಸ್ಯೆ ಬಗೆಹರಿಸುವುದರೊಂದಿಗೆ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬೇಸಿಗೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಸೌರ ಪಂಪ್ ಸೆಟ್ ಅಳವಡಿಸಲು ಕೇಂದ್ರ ಸರ್ಕಾರಿ ಪುರಸ್ಕೃತ ಕುಸುಮ್ ಬಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ರೈತರಿಗೆ ಅನುಕೂಲ ಮಾಡಿಕೊಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ನೀಡುವ ಸಬ್ಸಿಡಿ ಮೊತ್ತವನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ಉಳಿದ ಶೇ. 20ರಷ್ಟು ಮೊತ್ತವನ್ನು ರೈತರು ಭರಿಸಿದರೆ ಸಾಕು. ಅವರಿಗೆ ಸೋಲಾರ್ ಪಂಪ್ ಸೆಟ್ ಒದಗಿಸಲಾಗುತ್ತದೆ,” ಎಂದು ಹೇಳಿದರು.

“ಅದೇ ರೀತಿ ಕುಸುಮ್ ಸಿ ಯೋಜನೆಯಡಿ ಸಬ್ ಸ್ಟೇಷನ್ ವ್ಯಾಪ್ತಿಯಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ನೇರವಾಗಿ ಸಬ್ ಸ್ಟೇಷನ್ ಗಳ ಮೂಲಕ ರೈತರಿಗೆ ಒದಗಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಜಾಗ ಗುರುತಿಸುವ ಕೆಲಸ ನಡೆಯುತ್ತಿದೆ,” ಎಂದರು.

“ಚಿಕ್ಕಬಳ್ಳಾಪುರ, ಕೋಲಾರದಂತಹ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಒಂದು ಸಾವಿರ ಅಡಿ ಆಳಕ್ಕಿಂತ ಕೆಳಗೆ ಹೋಗಿದೆ. ಇಂತಹ ಕಡೆಗಳಲ್ಲಿ ಆಳದಿಂದ ನೀರು ಮೇಲಕ್ಕೆತ್ತಲು ಸಾಧ್ಯವಾಗುವಂತೆ ಸೋಲಾರ್ ಪಂಪ್ ಸೆಟ್ ಗಳನ್ನು ಅಭಿವೃದ್ಧಿಪಡಿಸಲಾಗುವುದು,” ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್(Minister M C Sudhakar), ಶಾಸಕರಾದ ಪ್ರದೀಪ್ ಈಶ್ವರ್(MLA Pradeep Eshwar) ,ಪುಟ್ಟಸ್ವಾಮಿಗೌಡ(Puttaswamy Gowda), ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕು‌ಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಚಿಕ್ಕಬಳ್ಳಾಪರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ಜಿಟ್ಟಾಲಿ, ಎಸ್ಪಿ ಕುಶಾಲ್ ಚೋಕ್ಸಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Tags: BJPChikkaballapurCongress PartyK J GeorgeK Sudhakarsudhakarನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆ, ಆಭರಣಗಳನ್ನು ಇತರರು ಬಳಕೆ ಮಾಡಿದರೆ ಕಾನೂನು ಕ್ರಮ..

Next Post

ಸಿದ್ದರಾಮಯ್ಯನವರ ವಿರುದ್ದ ಅಬ್ಬರಿಸಿದ ವಿಜಯೇಂದ್ರ ಮತ್ತು R ಆಶೋಕ್

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post

ಸಿದ್ದರಾಮಯ್ಯನವರ ವಿರುದ್ದ ಅಬ್ಬರಿಸಿದ ವಿಜಯೇಂದ್ರ ಮತ್ತು R ಆಶೋಕ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada