• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
June 29, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

7 ವಾರ್ಡ್‌ಗಳ 16 ಕ್ಕೂ ಹೆಚ್ಚು ಬೀದಿಗಳಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ, ವಿದ್ಯಾಕಾಶಿಯನ್ನು ಸ್ವಚ್ಛ, ಸುಂದರ, ಹಸಿರು ನಗರವಾಗಿ ರೂಪಿಸಲು ಕೈ ಜೋಡಿಸಿ

ADVERTISEMENT

ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ʼನಮ್ಮ ನಗರ; ಸ್ವಚ್ಛ ನಗರʼ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಳಮಡ್ಡಿ ಸುತ್ತಮುತ್ತಲಿನ ಪ್ರದೇಶ, ರೈಲು ನಿಲ್ದಾಣ ರಸ್ತೆ ಸಮೀಪ ಹಾಗೂ ಮಹಿಷಿ ರಸ್ತೆ ಹತ್ತಿರ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತಾ ಅಭಿಯಾನಕ್ಕೆ ಸಾರ್ವಜನಿಕರಾದ ನೀವು ಕೈ ಜೋಡಿಸಿ ನಮ್ಮ ನಗರ, ಸ್ವಚ್ಛ ನಗರ ಎಂಬ ಅಭಿಮಾನ ಪ್ರಜ್ಞೆ ನಗರದ ಪ್ರತಿ ನಾಗರಿಕರಲ್ಲಿ ಇರಬೇಕು. ಅಂದಾಗ ಮಾತ್ರ ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಹಾನಗರ ಪಾಲಿಕೆಯಿಂದ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಹಾಗೂ ನಗರ ನಿವಾಸಿಗಳು ಸಕ್ರಿಯವಾಗಿ ಭಾಗವಹಿಸಿದರೆ, ನಗರ ಸ್ವಚ್ಛತೆ ಕಾಪಾಡಬಹುದು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಮಹಾನಗರ ಪಾಲಿಕೆಯಿಂದ ಈ ಸ್ವಚ್ಛತಾ ಅಭಿಯಾನವನ್ನು ಪ್ರತಿವಾರ ನಡೆಸಬೇಕು. ಅವಳಿನಗರದ ನಾಗರಿಕರಲ್ಲಿ ಹೆಚ್ಚೆಚ್ಚು ಸಿವಿಕ್ ಸೆನ್ಸ್ ಬಳಸಬೇಕು. ಪ್ರತಿಯೊಬ್ಬರು ಪೌರ ಕಾರ್ಮಿಕರಂತೆ ತಮ್ಮ ಮನೆ ಹಾಗೂ ತಮ್ಮ ಮನೆ ಸುತ್ತಮುತ್ತಲಿನ ಪ್ರದೇಶವನ್ನು ತಾವೇ ಪ್ರತಿದಿನ ಸ್ವಚ್ಛವಾಗಿ ಇಡಬೇಕು. ತಮ್ಮ ಮನೆಯ ಹಿಂದೆ ಮುಂದೆ ಸರಕಾರಿ ಜಮೀನು, ರಸ್ತೆ ಇದ್ದರೂ ಅದು ತಮ್ಮದೆಂದು ತಿಳಿದು ಕ್ಲೀನ್ ಮಾಡಿ ಇಟ್ಟಕೊಳ್ಳಬೇಕು. ಇದು ನಮ್ಮ ನಗರ ಎಂಬ ಹೆಮ್ಮೆ ಮತ್ತು ಇದು ನನ್ನ ಕೆಲಸ ಎಂಬ ಭಾವನೆ ಇದ್ದಾಗ ಮಾತ್ರ ನಗರ ಸುಂದರ, ಹಸಿರು ಆಗಲು ಸಾಧ್ಯವೆಂದು ಸಚಿವರು ತಿಳಿಸಿದರು.

ಧಾರವಾಡ ನಗರದಲ್ಲಿ ರೈಲ್ವೆ ಸ್ಟೇಶನ್, ಮಾಳ ಮಡ್ಡಿ , ವನವಾಸಿ ರಾಮಮಂದಿರ, ಕಬ್ಬೂರ ರಸ್ತೆ ಮತ್ತು ರಾಮನಗೌಡ ಆಸ್ಪತ್ರೆ, ಮಾಳಾಪುರ ಲಾಸ್ಟ್ ಬಸ್ ನಿಲ್ದಾಣ, ಮತ್ತು ಶಿವಾಜಿ ಸರ್ಕಲ್, ಹೆಬ್ಬಳ್ಳಿ ಅಗಸಿ, ಚರಂತಿಮಠ ಗಾರ್ಡನ್, ಹೊಸಯಲ್ಲಾಪುರ ರಸ್ತೆ ಮತ್ತು ಪೌಲ್ ಕ್ಯಾಂಟಿನ್, ಸರಸಗಂಗಾ ಶಾಲೆ, ಜನ್ನತನಗರ ಪ್ರದೇಶಗಳಿಗೆ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಸ್ವಚ್ಛತಾ ಕಾರ್ಯಕ್ಕೆ ಕೈ ಜೋಡಿಸಿ, ಸಲಿಕೆಯಿಂದ ತ್ಯಾಜ್ಯ ಸಂಗ್ರಹಿಸಿದರು, ಬುಟ್ಟಿ ತುಂಬಿ ಕಸದ ಟ್ರ್ಯಾಕ್ಟರಿಗೆ ಸ್ವತಃ ಕಸ ಹಾಕಿದರು. ಕಸಬರಿಗೆಯಿಂದ ಕಸಗೂಡಿಸಿದರು. ಸಚಿವರು, ಜಿಲ್ಲಾಧಿಕಾರಿಗಳು ಬುಟ್ಟಿ, ಕಸಬರಿಗೆ ಹಿಡಿದು ಸ್ವಚ್ಛತೆಗೆ ಕೈ ಜೋಡಿಸಿದ್ದರಿಂದ, ಪೌರಕಾರ್ಮಿಕರ ಆತ್ಮಸ್ಥೈರ್ಯ ಹೆಚ್ಚಿ, ಅವರ ಅಭಿಮಾನ, ಗೌರವ, ಹೆಮ್ಮೆಯಿಂದ ಇನ್ನಷ್ಟು ಕೆಲಸ ಮಾಡಲು ಸ್ಫೂರ್ತಿ ದೊರೆಯಿತು.

ಅಭಿಯಾನದಲ್ಲಿ ಜಿ.ಪಂ.ಸಿಇಓ ಭುವನೇಶ ಪಾಟೀಲ, ಎಸ್.ಪಿ. ಡಾ.ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಆದಿಯಾಗಿ ಜಿಲ್ಲೆಯ ಎಲ್ಲ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆ, ಕಚೇರಿ ಸಿಬ್ಬಂದಿಗಳೊಂದಿಗೆ ಭಾಗವಹಿಸಿ, ಸಚಿವರ ಕನಸಿನ ಸ್ವಚ್ಛನಗರ ಅಭಿಯಾನಕ್ಕೆ ಕೈ ಜೋಡಿಸಿ, ಕಸಕಡ್ಡಿ, ಚರಂಡಿ ತ್ಯಾಜ್ಯ ತೆಗೆದರು.

ಕೊಳೆತ ಕಸಕಡ್ಡಿ ಚಲ್ಲಬೇಡಿ: ಚರಂಡಿ ಸ್ವಚ್ಛಗೊಳಿಸುವುದು, ತ್ಯಾಜ್ಯದ ಕಸ ತುಂಬುವುದು, ಪರಿಕರಗಳಿಂದ ತ್ಯಾಜ್ಯ ತುಂಬುವುದರ ಮೂಲಕ ಅವರು ಎಲ್ಲೆಂದರಲ್ಲಿ ಕಸ, ಮುಸುರೆ, ತ್ಯಾಜ್ಯ ಚೆಲ್ಲದಂತೆ ಹಾಗೂ ಅಲ್ಲಿಯೇ ತರಕಾರಿ ಮಾರುವವರಿಗೆ ಬೇಡವಾದ, ಕೊಳೆತ ತಪ್ಪಲು, ತರಕಾರಿಯನ್ನು ಎಲ್ಲಿ ಬೇಕಂದರಲ್ಲಿ ಎಸೆಯದಂತೆ ಸಚಿವರು ವಿನಂತಿಸಿದರು.

ಹೂಳು ತುಂಬಿದ ಚರಂಡಿ ಕ್ಲೀನ್: ಧಾರವಾಡ ರೈಲ್ವೆ ಸ್ಟೇಷನ್ ರಸ್ತೆ ಹತ್ತಿರ ಹುಳು ತುಂಬಿದ ಗಟಾರು ಸ್ವತಃ ಅವರೇ ಸ್ವಚ್ಛಗೊಳಿಸಿದರು, ಕಸಚಲ್ಲಿದ ಬ್ಲ್ಯಾಕ್ ಸ್ಪಾಟ್ ಗಳನ್ನು ಎಲ್ಲಾ ಅಧಿಕಾರಿಗಳು ಸೇರಿಕೊಂಡು ಸ್ವಚ್ಛತೆ ಕಾರ್ಯ ಮಾಡಿದರು. ಮನೆಯ ಕಾಂಪೌಂಡಿಗೆ ಹಚ್ಚಿ ಫುಟಪಾತ್ ಮೇಲೆ ಮಣ್ಣಿನ ರಾಶಿ ಬಿದ್ದಿರುವುದನ್ನು ಕಂಡು ತಕ್ಷಣವೇ ಜೆಸಿಬಿ ಮುಖಾಂತರ ತೆರವುಗೊಳಿಸಿದರು. ರಸ್ತೆಯಿಂದ ಮೇಲಿರುವ ಮತ್ತು ಕೆಳಗಿರುವ ಮ್ಯಾನ್ ಹೋಲ್ ಮುಚ್ಚಳಗಳು, ಕಸ ತುಂಬಿದ ಖಾಲಿ ಸೈಟ್‍ಗಳನ್ನು ಪರಿಶೀಲಿಸಿ, ತಕ್ಷಣ ಸಂಬಂಧಿಸಿದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದರು.

ಸ್ವಚ್ಛತಾ ಅಭಿಯಾನದಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಮಹಾನಗರಪಾಲಿಕೆ ಮಹಾಪೌರ ರಾಮಪ್ಪ ಬಡಿಗೇರ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ ಸಂತೋಷ ಬಿರಾದಾರ, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್. ಎಸ್. ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಮಹಾನಗರಪಾಲಿಕೆಯ ಸದಸ್ಯರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಅಧ್ಯಾಪಕರು, ಶಿಕ್ಷಕರು, ಇತರ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸಿಬ್ಬಂದಿಗಳು, ಸಾರ್ವಜನಿಕರು, ಪೌರಕಾರ್ಮಿಕರು ಭಾಗವಹಿಸಿದ್ದರು.

Tags: congress mla santhosh ladlabor minister santhosh ladMinister Santhosh Ladminister santosh ladsanthosh ladsanthosh lad in srinagarsanthosh lad latest newssanthosh lad newssanthosh lad questioned modisanthosh lad speechsanthosh lad today newssanthosh lad vs narendra modiSantosh Ladsantosh lad ballarysantosh lad congresssantosh lad mlasantosh lad newssantosh lad on modisantosh lad on pm modisantosh lad speechsantosh lad teamsantosh lad vs pm modi
Previous Post

ನಮ್ಮ ನಗರ ; ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Next Post

E-Khata: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post

E-Khata: ಇ-ಖಾತೆ ಮಾಡಿಸಿಕೊಳ್ಳಿ, ವಂಚನೆಯಿಂದ ತಪ್ಪಿಸಿಕೊಳ್ಳಿ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada