ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ಒಟ್ಟು 437 ನಮ್ಮ ಕ್ಲಿನಿಕ್ ಸ್ಥಾಪನೆಯಾಗುತ್ತಿದೆ.
ಹುಬ್ಬಳ್ಳಿ: ಬಡವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುವ ದೃಷ್ಟಿಯಿಂದ ‘ನಮ್ಮ ಕ್ಲಿನಿಕ್’ ಸ್ಥಾಪಿಸಲಾಗುತ್ತಿದ್ದು, ಇವುಗಳ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್‌ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು ನೆಗಡಿ, ಜ್ವರ ಇತ್ಯಾದಿ ಸಣ್ಣಪುಟ್ಟ ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಇದರಿಂದ ಆರ್ಥಿಕವಾಗಿ ಹಿಂದುಳಿದ ಜನರಿಗೆ ಪರಿಪೂರ್ಣವಾದ ಚಿಕಿತ್ಸೆ ಸಿಗುತ್ತಿರಲಿಲ್ಲ. ಹೀಗಾಗಿ ಬಡವರಿಗೆ ಪ್ರಾಥಮಿಕವಾಗಿ ಚಿಕಿತ್ಸೆ ನೀಡುವ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ಒಟ್ಟು 437 ನಮ್ಮ ಕ್ಲಿನಿಕ್ ಸ್ಥಾಪನೆಯಾಗುತ್ತಿದೆ.
ನಮ್ಮ ಕ್ಲಿನಿಕ್‌ಗಳ ಕಾರ್ಯವೈಖರಿ ಹಾಗೂ ಜನರ ಸ್ಪದಂತೆ ಗಮನಿಸಿ ರಕ್ತ ಪರೀಕ್ಷೆ ಮುಂತಾದ ಪೂರ್ವಭಾವಿ ಪರೀಕ್ಷೆ ಕೈಗೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಟೆಲಿ ಮೆಡಿಸಿನ್ ವ್ಯವಸ್ಥೆಯನ್ನೂ ಇದಕ್ಕೇ ಜೋಡಿಸಲಾಗುವುದು ಎಂದರು.ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಗೂ ಮುನ್ನ ಹಲವಾರು ವರದಿಗಳು ಬಂದಿದೆ. ಕಾಯ್ದೆ ಆಗಿ ಅಂತಿಮಗೊಂಡಿದೆ. ಇದು ಈಗಿನ ಕಾನೂನಿನ ವಸ್ತುಸ್ಥಿತಿ. ರಾಜ್ಯಗಳ ಪುನರ್ ವಿಂಗಡನಾ ಕಾಯ್ದೆಯ ನಿರ್ಣಯಗಳನ್ನು ಅವರು ಪ್ರಶ್ನಿಸಿದ್ದಾರೆ. ಇದನ್ನು ನಿರ್ವಹಿಸಬೇಕೋ, ಬೇಡವೋ ಎಂದೇ ಸರ್ವೋಚ್ಚ ನ್ಯಾಯಾಲಯ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದ್ದು, ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ಇರುವುದರಿಂದ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ ಎಂದು ತಿಳಿಸಿದರು. 1ಇಂದು ಗೃಹ ಸಚಿವರ ಭೇಟಿ:ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಿನ ಗಡಿವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವರು ಎರಡು ರಾಜ್ಯಗಳ ಸಿಎಂಗಳ ಸಭೆ ಕರೆಯಲಾಗಿದೆ. ಅಲ್ಲಿ ಕರ್ನಾಟಕದ ನಿಲುವನ್ನು ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ತಿಳಿಸಲಾಗುವುದು. ನಮ್ಮ ನಿಲವು ಸ್ಪಷ್ಟವಾಗಿದ್ದು, ಇದನ್ನು ಮನವರಿಕೆ ಮಾಡಲು ಸಿದ್ದವಾಗಿ ಹೋಗುತ್ತಿರುವುದಾಗಿ ತಿಳಿಸಿದರು.