• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 14, 2025
in Top Story, ರಾಜಕೀಯ
0
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(D.K Shivakumar) ಹೇಳಿದ್ದಾರೆ.

ADVERTISEMENT
CM Siddaramaiah: ಬಸವರಾಜ ಹೊರಟ್ಟಿ ಮೇಲೆ ಎಷ್ಟು ಪ್ರೀತಿ ನೋಡಿ ಸಿದ್ದರಾಮಯ್ಯಗೆ..! #basavarajhoratti

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ.

siddaramaiah ; ಏನಯ್ಯ ಬೊಮ್ಮಾಯಿ ನನ್ನೇ ಬೈತಿದ್ದೆ ಯಾಕೆ..?. #pratidhvani

ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದರು.

Siddaramaih ; ನನಗೂ ಅವರಿಗೂ ಆತ್ಮೀಯತೆ ಇದ್ದರೂ ಸಭಾಪತಿ ಕುರ್ಚಿಯಲ್ಲಿ ಕುಳಿತಾಯ ಅದಕ್ಕೆ ನ್ಯಾಯ ಒದಗಿಸುತ್ತಾರೆ.

ಕರ್ನಾಟಕದ 4 ಸಾವಿರ ಕಾರ್ಯಕರ್ತರು ಭಾಗಿ

ದೆಹಲಿಯ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸುವ 1500 ಕಾರ್ಯಕರ್ತರಿಗೆ ನಾವು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದೇವೆ. ಸುಮಾರು 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮ ವ್ಯವಸ್ಥೆ ತಾವೇ ಮಾಡಿಕೊಂಡಿದ್ದಾರೆ. ಕೆಲವರು ವಿಮಾನ, ಮತ್ತೆ ಕೆಲವರು ರೈಲಲ್ಲಿ ಆಗಮಿಸಿದ್ದಾರೆ.

DK Shivakumar  ನನ್ನ ತಮ್ಮನ ಸೋಲಿಸಿದ್ರಿ, ಯಾಕೆ ಸಹಾಯ ಮಾಡಬೇಕು?1 #pratidhvani

ಸುಮಾರು 3500 ರಿಂದ 4000 ಜನ ಪ್ರತಿಭಟನೆಗೆ ಬಂದಿದ್ದಾರೆ. ಮತಕಳ್ಳತನ ವಿರುದ್ಧ ರಾಜ್ಯದಲ್ಲಿ ನಡೆದ ಸಹಿಸಂಗ್ರಹ ಅಭಿಯಾನದಲ್ಲಿ 1.42 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇಲ್ಲಿ ಸೇರಿರುವ ನಾಯಕರು, ಕಾರ್ಯಕರ್ತರೇ ಈ ಹೋರಾಟದ ಉತ್ಸಾಹಕ್ಕೆ ಸಾಕ್ಷಿ. ಇಲ್ಲಿರುವ ಪ್ರತಿಯೊಬ್ಬರೂ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಬೇಕು, ಮತದಾನದ ಹಕ್ಕು ಕಾಪಾಡಬೇಕು ಎಂದು ಬಂದಿದ್ದಾರೆ ಎಂದು ತಿಳಿಸಿದರು.

V Somanna: ತುಮಕೂರಿಗೆ ಹೆಚ್ಚಿನ ರೈಲು ಸಾಧ್ಯತೆ : ಕೇಂದ್ರ ಸಚಿವ ವಿ ಸೋಮಣ್ಣ..! #sureshgowda

ದೆಹಲಿಗೆ ಬರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆಯಂತೆ. ವಾಹನ ದೆಹಲಿಯೊಳಗೆ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾಕೆ ಗಾಬರಿಯಾಗುತ್ತಿದೆ ಗೊತ್ತಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗುಡುಗಿದರು.

podcast with Retired IAS Officer SM Jamdar ಲಿಂಗಾಯತ ಅಂದ್ರೆ ಹಿಂದೂ ಅಲ್ಲ SM ಜಮಾದಾರ್ #politics  #podcast

ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ ಎಂದರು.

Tags: congresscongress protestdcm dk shivkumarKarnatakaPoliticsprotestVote Chori
Previous Post

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

Next Post

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಟ್ರಂಪ್ ವಿರುದ್ಧ ಪೋಪ್ ಲಿಯೋ ಕಟು ಟೀಕೆ:ಯುದ್ಧೋನ್ಮಾದಕ್ಕೆ ‘ಹುಚ್ಚುತನ’ ಎಚ್ಚರಿಕೆ

ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಆರೋಪ: CID ‘ಬಿ ರಿಪೋರ್ಟ್’ ಸಲ್ಲಿಕೆ

April 13, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
Next Post
BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada