• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತವಾಗಿರುತ್ತವೆ- ಮುಖ್ಯಮಂತ್ರಿ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
April 20, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”
Share on WhatsAppShare on FacebookShare on Telegram

ಮೈಸೂರು : ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT
Siddaramaiah:ಯಾರಿಗೆ ಇತಿಹಾಸ ಗೊತ್ತಿಲ್ಲ ಅವರು ಇತಿಹಾಸವನ್ನು ನಿರ್ಮಾಣ ಮಾಡಲು ಸಾಧ್ಯ  #pratidhvani

ನಗರದಲ್ಲಿಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, 2026ರ ಬಸವಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ಬಸವಣ್ಣನವರು ಸಮಾಜದಲ್ಲಿ ಜಾತಿವರ್ಣ ವ್ಯವಸ್ಥೆಗಳ ವಿರುದ್ಧ ಹೋರಾಡಿದರು. ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿ, ಕರ್ಮ ಸಿದ್ಧಾಂತವನ್ನು ಅಲ್ಲಗಳೆದಿದ್ದರು. ಸಾವಿರಾರು ವರ್ಷಗಳಿಂದ ಶೋಷಿತ ವರ್ಗಗಳು ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿತ್ತು. ಬಸವಾದಿಶರಣರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮಕ್ಕೆ ನಾಂದಿ ಹಾಡಿದರು. ವೈದಿಕ ಧರ್ಮದಲ್ಲಿ ಚರ್ತುವರ್ಣ ವ್ಯವಸ್ಥೆಯಿತ್ತು. ಆದ್ದರಿಂದ ಹನ್ನರೆಡನೇ ಶತಮಾನದಲ್ಲಿ ಸಮಾನತೆ, ಮಾನವೀಯತೆಯಿಂದ ಕೂಡಿದ ಲಿಂಗಾಯತ ಧರ್ಮವನ್ನು ಸ್ಥಾಪಿಸಲಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ವೈರುಧ್ಯತೆಯ ಸಮಾಜದಲ್ಲಿ ಬದಲಾವಣೆ ತರಲು ಬುದ್ಧಬಸವಾದಿ ಶರಣರು ಶ್ರಮಿಸಿದ್ದರು. ಆದರೂ ಇಂದಿಗೂ ಜಾತಿವ್ಯವಸ್ಥೆ ಪ್ರಚಲಿತವಾಗಿದೆ. ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ. ಆರ್ಥಿಕ ಸಾಮಾಜಿಕ ಶೈಕ್ಷಣಿಕ ಶಕ್ತಿ ದೊರಕಿದಾಗ ಮಾತ್ರ ಚಲನೆಯಿಲ್ಲದ ಜಾತಿವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ. ‘ಇವನಾರವ ಇವನಾರವ’ ಎನ್ನುವ ಬದಲು ಇವ ‘ಇವ ನಮ್ಮವ’ಎನ್ನುವ ವ್ಯವಸ್ಥೆ ಬರುವವರೆಗೂ ಬಸವ ವಿಚಾರಗಳು ಪ್ರಸ್ತುತವಾಗಿರುತ್ತವೆ ಎಂದು ಪ್ರತಿಪಾದಿಸಿದ್ದಾರೆ..

ಬಸವಣ್ಣನವರು ಕಾಯಕ ಮತ್ತು ದಾಸೋಹ ತತ್ವವನ್ನು ವಿಶ್ವಕ್ಕೆ ಪರಿಚಯಿಸಿ, ಎಲ್ಲಾ ವೃತ್ತಿಗಳೂ ಘನತೆಯುಳ್ಳದ್ದು ಎಂದಿದ್ದರು. ಉತ್ಪಾದನೆಯಾದ ಸಂಪತ್ತನ್ನು ಸಮಾನವಾಗಿ ಹಂಚಿಕೊಳ್ಳುವುದೇ ಕಾಯಕ ಮತ್ತು ದಾಸೋಹದ ಮೂಲಮಂತ್ರ. ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ಜಾರಿಗೆ ಬರುವ ಮುಂಚೆ ಮನುಶಾಸ್ತ್ರ ಜಾರಿಯಲ್ಲಿತ್ತು. ಆದ್ದರಿಂದ ಅವರು’ಹಿಂದು ಧರ್ಮವನ್ನು ಸುಧಾರಿಸಲು ಸಾಧ್ಯವಾಗಲಿಲ್ಲ’ ವೆಂದು ಮನುಶಾಸ್ತ್ರವನ್ನು ಸುಡುತ್ತೇನೆ ಎಂದಿದ್ದರು. ಅಸಮಾನತೆಯ ಸಮಾಜದಲ್ಲಿ ಬದಲಾವಣೆ ತರಲು ಪ್ರತಿಯೊಬ್ಬರಿಗೂ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಸ್ವಾತಂತ್ರ್ಯ ಅಗತ್ಯ ವೆಂದು ತಿಳಿಸಿದ್ದರು. ಸಮಾಜದ ಅಶಕ್ತರ ಮೇಲೆ ನಡೆದ ಅನ್ಯಾಯಗಳ ಇತಿಹಾಸದ ಬಗ್ಗೆ ಅರಿವಿಲ್ಲದವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲವೆಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮನುವಾದಿಗಳು ಮೂಢನಂಬಿಕೆಗಳನ್ನು ಬೆಳೆಸುತ್ತಾರೆ..

ಸಮಾಜದಲ್ಲಿ ಅಸಮಾನತೆಯನ್ನು ನಿರಂತರಗೊಳಿಸಲು ಪಟ್ಟಭದ್ರಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ. ಜಾತಿವ್ಯವಸ್ಥೆ ನಿರ್ಮೂಲನೆಗೆ ವೈಚಾರಿಕ ವೈಜ್ಞಾನಿಕ ಶಿಕ್ಷಣ ಅಗತ್ಯ. ಆದ್ದರಿಂದ ಯುವಜನತೆ ಮೂಢನಂಬಿಕೆಗಳಿಗೆ ಬಲಿಯಾಗಬಾರದು. ಮನುವಾದಿಗಳು ಮೂಢನಂಬಿಕೆಗಳನ್ನು ಬೆಳೆಸುತ್ತಾರೆ ಎಂದು ಕಿಡಿಕಾರಿದ್ದಾರೆ.

DR ANJANAPPA : ಎಸಿಯಿಂದ ಕಣ್ಣಿನ ಮೇಲೆ ಏನು ಎಫೆಕ್ಟ್..? #pratidhvani

ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ದೊರೆಯಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಯಿತು. ಇದನ್ನೇ ಬಸವ, ಬುದ್ಧ, ಅಂಬೇಡ್ಕರ್ ಹೇಳಿದ್ದರು. ಬಸವಣ್ಣನವರ ಪಥದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಬಗ್ಗೆ ಶಪಥ ಮಾಡಬೇಕು. ನಮ್ಮ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋಗಳನ್ನು ಕಡ್ಡಾಯ ಮಾಡಿದ್ದಲ್ಲದೆ, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಬಸವಣ್ಣನವರ ಕರ್ಮ ಭೂಮಿ ಅನುಭವ ಮಂಟಪದ ಪುನ: ಸ್ಥಾಪನೆಗೆ ಗೋ.ರು.ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಅದರ ವರದಿಯನ್ವಯ ಅನುದಾನ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ಪೂರ್ಣಗೊಳ್ಳುವ ಬಗ್ಗೆ ಭರವಸೆಯಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ. ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದೆ. ಗ್ಯಾರಂಟಿ ಯೋಜನೆಗಳು ಎಲ್ಲಾ ಧರ್ಮದವರಿಗೆ ತಲುಪುತ್ತಿದೆ. ಚಲನರಹಿತ ಜಾತಿ ವ್ಯವಸ್ಥೆಯಲ್ಲಿ ಆರ್ಥಿಕ, ಸಾಮಾಜಿಕ ಶಕ್ತಿ ದೊರೆತರೆ ಮಾತ್ರ ಚಾಲನೆ ದೊರೆಯುತ್ತದೆ ಎಂದು ತಿಳಿಸಿದ್ದಾರೆ.

ಎಲ್ಲಾ ಧರ್ಮಗಳೂ ಮತ್ತೊಬ್ಬರನ್ನು ದ್ವೇಷಿಸಿ ಎಂದು ಹೇಳುವುದಿಲ್ಲ.ಎಲ್ಲರೂ ಪರಸ್ಪರ ಪ್ರೀತಿಸಬೇಕು ಹಾಗೂ ಮನುಷ್ಯರಾಗುವ ಪ್ರಯತ್ನ ಮಾಡಬೇಕು, ಬಸವಣ್ಣವನರೂ ಇದನ್ನೇ ಪ್ರತಿಪಾದಿಸಿದ್ದರು.. ಸರಳವಾಗಿ ಕನ್ನಡದಲ್ಲಿಯೇ ವಚನಗಳನ್ನು ರಚಿಸಿ ಜನಸಾಮಾನ್ಯರಿಗೆ ತಲುಪುವಂತೆ ಮಾಡಿದ್ದಾರೆ. ಬಸವ ಭವನಕ್ಕೆ ಐದು ಕೋಟಿ ರೂಪಾಯಿಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನರಾಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದ್ದಾರೆ.

Tags: Basava JayantiBasaveshwarBJPcaste systemCM in MysoreCM Siddaramaiahcongress karnatakaDr B R AmbedkarGautam BuddhaJagdguru BasavannaKarnataka Governmentkarnataka newsPratidhvaniRSSThoughts Of Basavanna
Previous Post

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

Next Post

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
Next Post
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!