• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು.

“ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ ಸಮುದಾಯದ ಜನ ನೂರಕ್ಕೆ 99 ರಷ್ಟು ಭಾಗ ನಮಗೆ ಬೆಂಬಲವಾಗಿ ನಿಂತಿದ್ದಾರೆ. ನಿಮ್ಮೆಲ್ಲರ ಪರವಾಗಿ ತುಮಕೂರಿನಲ್ಲಿ ದೊಡ್ಡ ಸಮಾರಂಭ ಮಾಡಿದ್ದೆವು. ಏನಾದರೂ ಮಾಡಿ ವಿಧಾನಸಭೆಯಲ್ಲಿ ನಿಮಗೆ ಒಂದು ಸೀಟು ಅವಕಾಶ ಮಾಡಿಕೊಡಬೇಕು ಎಂಬ ಆಲೋಚನೆ ನಮ್ಮಲ್ಲಿತ್ತು. ಆದರೆ ಕಾರಣಾಂತರಗಳಿಂದ ಸಮೀಕ್ಷೆ ವರದಿ ಆಧರಿಸಿ ತೀರ್ಮಾನ ಮಾಡಬೇಕಾಯಿತು” ಎಂದರು.

“17 ರಾಜ್ಯಗಳಲ್ಲಿ ನಿಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಗಿದೆ ಎಂದು ರವಿ ಕುಮಾರ್ ಅವರು ತಿಳಿಸಿದರು. ನಮ್ಮ ರಾಜ್ಯದಲ್ಲೂ ಸೇರಿಸಬೇಕು ಎಂದು ಕೇಳಿದ್ದೀರಿ. ಮುಖ್ಯಮಂತ್ರಿಗಳು ಹಾಗೂ ನಾವು ಮುಂದಿನ ದಿನಗಳಲ್ಲಿ ಈ ವಿಚಾರ ಚರ್ಚೆ ಮಾಡುತ್ತೇವೆ. ಈ ಸಮುದಾಯದಿಂದ ಕೆಲವೇ ಕೆಲವರು ಮಾತ್ರ ಅಧಿಕಾರಿಗಳಿದ್ದಾರೆ. ನಿಮ್ಮಲ್ಲಿ ಬಹುತೇಕರು ಕುಲಕಸುಬು ಬಿಟ್ಟಿಲ್ಲ. ನಮ್ಮ ಸರ್ಕಾರ ನಿಮ್ಮ ಬೇಡಿಕೆಗೆ ಸ್ಪಂದಿಸಲು ಬದ್ಧವಾಗಿದೆ” ಎಂದು ಭರವಸೆ ನೀಡಿದರು.

“ದೇವರು ವರ ಅಥವಾ ಶಾಪ ನೀಡುವುದಿಲ್ಲ. ಕೇವಲ ಅವಕಾಶ ನೀಡುತ್ತಾನೆ. ಅದನ್ನು ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ನಮ್ಮ ನಿಮ್ಮ ಮಧ್ಯೆ ಪರಸ್ಪರ ನಂಬಿಕೆ, ವಿಶ್ವಾಸ ಗಟ್ಟಿಯಾಗಿದೆ. ನಾವು ಇದನ್ನು ಉಳಿಸಿಕೊಂಡು ಹೋಗುತ್ತೇವೆ. ನೀವು ನಮ್ಮ ಬೆಂಬಲಕ್ಕೆ ನಿಲ್ಲಬೇಕು. ನೀವು ಮಾನಸಿಕವಾಗಿ ಕುಗ್ಗಬಾರದು, ಅಂಜಬಾರದು. ನಮ್ಮ ಸರ್ಕಾರ ನಿಮ್ಮ ಪರವಾಗಿದೆ” ಎಂದು ತಿಳಿಸಿದರು.

ಜಾತಿಗಣತಿ ವಿಚಾರವಾಗಿ ಮಾಧ್ಯಮಗಳ ವರದಿ ಸುಳ್ಳು:

ಕಾರ್ಯಕ್ರಮದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಜಾತಿಗಣತಿ ವಿಚಾರವಾಗಿ ಸಚಿವ ಸಂಪುಟ ಸಭೆಯ ಚರ್ಚೆ ಬಗ್ಗೆ ಕೇಳಿದಾಗ, “ಜಾತಿ ಗಣತಿ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಸುಳ್ಳು. ನಾವು ಏರು ಧ್ವನಿಯಲ್ಲೂ ಮಾತಾಡಿಲ್ಲ, ಕೆಳ ಧ್ವನಿಯಲ್ಲೂ ಮಾತಾಡಿಲ್ಲ. ವಿಚಾರ ವಿನಿಮಯ ಮಾಡಿದ್ದೇವೆ ಅಷ್ಟೇ. ಯಾವುದೇ ಪ್ರತಿರೋಧವಿಲ್ಲ. ಸಚಿವರು ತಮ್ಮ ಸಲಹೆ ನೀಡಿದ್ದಾರೆ. ಇದರ ಹೊರತಾಗಿ ಬೇರೆ ಯಾವುದೇ ತೀರ್ಮಾನವಾಗಿಲ್ಲ” ಎಂದರು.

Tags: BJPcongressCongress PartyDK ShivakumarMadiwalaSamajasiddaramaiahಬಿಜೆಪಿ
Previous Post

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

Next Post

ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ – ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
Next Post
ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ – ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 

ಮಿಸ್ಟರ್ ಅಶೋಕ್ ಅವರೇ..ಜಾಸ್ತಿ ಮಾತಾಡಬೇಡಿ - ವಿಪಕ್ಷ ನಾಯಕನ ವಿರುದ್ಧ ಎಸ್.ಟಿ ಸೋಮಶೇಖರ್ ಗರಂ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada