ಬೆಂಗಳೂರು: ಮೇ.18: ಸಿಎಂ ಘೋಷಣೆ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಗ್ಯಾರಂಟಿಗಳ ಬಗ್ಗೆ ವ್ಯಂಗ್ಯವಾಡಿದ್ದವರಿಗೆ ಖಡಕ್ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಕರ್ನಾಟಕ ಮುಖ್ಯಮಂತ್ರಿ ಎಂದು ಖುದ್ದು ಎಐಸಿಸಿ ಅಧಿಕೃತವಾಗಿ ಘೋಷಣೆ ಮಾಡಿದೆ. ಇದರೊಂದಿಗೆ ಕೊನೆಗೂ ಕರ್ನಾಟಕ ಸಿಎಂ ಆಯ್ಕೆ ಗೊಂದಲಕ್ಕೆ ತೆರೆ ಬಿದ್ದಿದೆ. ಇನ್ನು ಸಿಎಂ ಘೋಷಣೆ ಮುನ್ನ ಕರ್ನಾಟಕದಲ್ಲಿ ಗ್ಯಾರಂಟಿಗಳ (Congress guaranty) ಬಗ್ಗೆ ನಾನಾ ಚರ್ಚೆಗಳು ನಡೆಯುತ್ತಿವೆ. ಸಿಎಂ ಗ್ಯಾರಟಿಯೇ ಆಗಿಲ್ಲ. ಈ ಗ್ಯಾರಂಟಿಗಳು ಯಾವ ಜಾರಿ ಮಾಡುತ್ತಾರೆ ಎನ್ನುವ ವ್ಯಂಗ್ಯದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ಇವುಗಳಿಗೆ ಸಿದ್ದರಾಮಯ್ಯ ಒಂದೇ ಮಾತಿನಲ್ಲಿ ಖಡಕ್ ಆಗಿ ಹೇಳಿದ್ದಾರೆ.

ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಗ್ಯಾರಂಟಿ ಬಗ್ಗೆ ವ್ಯಂಗ್ಯವಾಡುತ್ತಿದ್ದವರಿಗೆ ಪರೋಕ್ಷವಾಗಿ ತಿವಿದಿದ್ದಾರೆ.











