• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮದು ರೈತ ಪರ ಸರ್ಕಾರ: ಎನ್ ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 5, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸಿನಿಮಾ
0
Share on WhatsAppShare on FacebookShare on Telegram

ನಮ್ಮದು ಜನಸಾಮಾನ್ಯರ , ರೈತರ ಪರ ಸರ್ಕಾರ, ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜಿ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಕೃಷಿ ಲಾಭದಾಯಕ
ವಾಗಿಸುವುದೇ ರಾಜ್ಯ ಸರ್ಕಾರದ ಧ್ಯೇಯ ಅದಕ್ಕಾಗಿ ಕೃಷಿ ,ಪಶುಸಂಗೋಪನೆ, ತೋಟಗಾರಿಗೆ ರೇಷ್ಮೆ ಎಲ್ಲವನ್ನೂ ಒಟ್ಟುಗೂಡಿಸಿ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಕೃಷಿಕರ ಆದಾಯದಲ್ಲಿ ವೃದ್ಧಿಯಾಗಬೇಕು ವೈಜ್ಞಾನಿಕ ಬೆಲೆ ದೊರೆಯುವ ಜೊತೆಗೆ ಸರ್ವ ಋತು ವರಮಾನ ಬರುವಂತೆ ಬೇಸಾಯ ಪದ್ಧತಿ ಅಳವಡಿಕೆಯಾಗಬೇಕು ಎಂದು ಚಲುವರಾಯಸ್ವಾಮಿ ತಿಳಿಸಿದರು.

ಕೃಷಿಕರು ಸಮಗ್ರ ಬೇಸಾಯಕ್ಕೆ ಆದ್ಯತೆ ನೀಡಬೇಕು.
ಹೈನುಗಾರಿಕೆ ಕುರಿ, ಕೋಳಿ, ಹಂದಿ, ಮೀನು, ಜೇನು ಸಾಕಾಣಿಕೆಗಳ ಬಗ್ಗೆಯೂ ಗಮನ ಹರಿಸಬೇಕು ಆಗ ಹೆಚ್ಚಿನ ಆದಾಯ ಪಡೆಯಲು ಸಾಧ್ಯವಿದೆ ಎಂದು ಅವರು ಹೇಳಿದರು.

ಕೃಷಿ ಯಾಂತ್ರೀಕರಣದ ಪರಿಣಾಮಕಾರಿ ಅಳವಡಿಕೆ ಅಗತ್ಯ
ಕೃಷಿ ಇಲಾಖೆ ವತಿಯಿಂದ ಕಳೆದ ಸಾಲಿನಲ್ಲಿ 1000 ಕೋಟಿ ರೂ ವೆಚ್ಚದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಲಾಗಿದೆ ಎಂದು ಕೃಷಿ ಸಚಿವರು ಹೇಳಿದರು

ಕೃಷಿಕರು ಸಾಂಪ್ರಾದಾಯಿಕ ಕೃಷಿ ಜೊತೆಗೆ ಸಮಗ್ರ ಬೇಸಾಯಕ್ಕೆ ಒತ್ತು ನೀಡಬೇಕು, ಬದಲಾಗುತ್ತಿರುವ ತಂತ್ರಜ್ಞಾನ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಉತ್ಪಾದನೆಯ ಮೌಲ್ಯವರ್ಧನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬೇಕು ಎಂದು ಕಿವಿ ಮಾತು ಹೇಳಿದರು.

ದಸರಾ ನಮ್ಮ ಭವ್ಯ ಪರಂಪರೆಯ ಸಂಕೇತ, ನಮ್ಮ ಶ್ರೀಮಂತ ಸಂಸ್ಕೃತಿಯ ಪ್ರತೀಕ .
ಇದು, ನಾಡಿನ ಅದಿದೇವತೆ ಚಾಮುಂಡೇಶ್ವರಿಯ ಆರಾಧನೆಯ ಪರ್ವಕಾಲ, ತಾಯಿ ಚಾಮುಂಡೇಶ್ವರಿ ನಾಡಿನ ಎಲ್ಲರಿಗೂ ಒಳಿತು ಮಾಡು ಎಂದು ನಾನು ಈ ಸಂದರ್ಭದಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದರು.

ಮೈಸೂರು ದಸರಾ ಎಂದರೆ ಅದೊಂದು ವಿಸ್ಮಯ, ಸಂಭ್ರಮ, ಇದು ನಾಡಿನ ಮನೆ ಮನೆ ಹಬ್ಬ.
ಶತ ಶತಮಾನಗಳಿಂದ ರಾಜ ಪರಂಪರೆಯಿಂದ ಈವರೆಗೂ ಅದೇ ವೈಭವ, ಭಕ್ತಿ, ಶ್ರದ್ಧೆ, ಸಂಪ್ರದಾಯಗಳಿಂದ ಮುಂದುವರೆದಿದೆ.
ದಸರಾ ಬಂತೆಂದರೆ ಇಡೀ ವಿಶ್ವವೇ ಬೆರಗುಗಣ್ಣಿನಿಂದ ಇತ್ತ ನೋಡುತ್ತದೆ ಎಂದು ಅವರು ಮೈಸೂರು ದಸರಾ ಸಡಗರ ಬಣ್ಣಿಸಿದರು.

ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ವೆಂಕಟೇಶ್ ಅವರೂ ಸಹ ಮಾತನಾಡಿದರು. ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ,
ಶಾಸಕರಾದ ಹರೀಶ್ ಗೌಡ ಮತ್ತಿತರರು ಹಾಜರಿದ್ದರು.
ಇದೇ ವೇಳೆ ರೈತ ಸಾಧಕರನ್ನು ಸನ್ಮಾನಿಸಲಾಯಿತು.

Tags: BJPCongress PartyMinister Venkateshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಯಚೂರು: ಸ್ವಾಭಿಮಾನಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ

Next Post

ರೇಣುಕಾಸ್ವಾಮಿ ಕೊಲೆ ಕೇಸ್:ಚಾಟ್, ವಿಡಿಯೋ ಡಿಲೀಟ್ ಮಾಡಿಸಿದ್ಯಾರು? -ವಕೀಲರ ಖಡಕ್ ಪ್ರಶ್ನೆ!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
Next Post

ರೇಣುಕಾಸ್ವಾಮಿ ಕೊಲೆ ಕೇಸ್:ಚಾಟ್, ವಿಡಿಯೋ ಡಿಲೀಟ್ ಮಾಡಿಸಿದ್ಯಾರು? -ವಕೀಲರ ಖಡಕ್ ಪ್ರಶ್ನೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada