ಬೆಂಗಳೂರು : ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತಳ ಬುಡವಿಲ್ಲದೇ ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಹೇಳಿದ್ದಾರೆ .

ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಕಳೆದ ಮೂರುವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರಕ್ಕೆ ರಾಜ್ಯಕ್ಕೆ ತುಂಬಾನೇ ಕೊಡುಗೆ ನೀಡಿದೆ. ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ನೋಡಿ ರಾಜ್ಯದ ಜನತೆಗೆ ಬಿಜೆಪಿಗೆ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
ಬಿಜೆಪಿಯಲ್ಲಿಯೂ ಕುಟುಂಬ ರಾಜಕಾರಣ ನಡೆಯುತ್ತಿದೆಯಾ ಎಂಬ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಅವರು, ನಾವು ಉಳಿದ ಪಕ್ಷಗಳಂತೆ ಅಜ್ಜ, ಅಜ್ಜಿ , ಮಗ, ಮೊಮ್ಮಗ ಅಂತೆಲ್ಲ ಟಿಕೆಟ್ ನೀಡಿಲ್ಲ. ಪಕ್ಷದ ಕಾರ್ಯಕರ್ತರಾಗಿ ಗುರುತಿಸಿಕೊಂಡ ಕೆಲವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ರು.






