ಮಂಡ್ಯ (Mandya) ಜನರ ಕುರಿತು ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಆಡಿದ ಮಾತು ತೀವ್ರ ಸ್ವರೂಪ ಪಡೆದುಕೊಂಡಿದ್ದು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.ಯುವ ಕಾಂಗ್ರೆಸ್ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದಲ್ಲಿ ಕಾರ್ಯಕರ್ತನೊಬ್ಬನ್ನ ಕುರಿತು ಮಂಡ್ಯದ ಛತ್ರಿ ಆಟಗಳು ಆಡಬೇಡ ಎಂದು ನೀಡಿದ ಹೇಳಿಕೆ ಅಲ್ಲೋಲ ಕಲ್ಲೋಲ ಎಬ್ಬಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮಂಡ್ಯದ ಜನರು ಸಿಡಿದೆದ್ದಿದ್ದಾರೆ. ಈ ಕುರಿತ ಮಾತನಾಡಿದ ವಿರೋಧ ಪಕ್ಷದ ನಾಯಕ ಬಿ ವೈ ವಿಜಯೇಂದ್ರ (BY Vijayendra), ಡಿಕೆ ಶಿವಕುಮಾರ್ ಅವರಿಗೆ ಅಧಿಕಾರದ ಮದ ಹೆಚ್ಚಾಗಿರುವ ಕಾರಣ ಈ ರೀತಿ ಮಾತನಾಡಿದ್ದಾರೆ. ಮಂಡ್ಯದ ಜನ ಅವರ ಈ ಹೇಳಿಕೆಯನ್ನು ಪ್ರಶ್ನಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಹೌದು ನನಗೆ ಮದ. ನನಗೆ ಬೇಕಾದವರನ್ನು ನಾನು ಹೇಗೆ ಬೇಕಿದ್ರೂ ಕರೀತಿನಿ, ಅವನು ಸ್ವಲ್ಪ ಕಡಿಮೆ ಮಾಡಿಕೊಳ್ಳಲಿ ಎಂದು ವಿಜಯೇಂದ್ರ ಗೆ ಕೌಂಟರ್ ಕೊಟ್ಟಿದ್ದಾರೆ.
ಹೀಗಾಗಿ ಡಿಕೆ ಶಿವಕುಮಾರ್ ಈ ಹೇಳಿಕೆಗಳು ಮಂಡ್ಯ ರಾಜಕಾರಣದಲ್ಲಿ ಬೆಂಕಿ ಹಚ್ಚುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ.