ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿರುವ ವಿವಿಧ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದ ಬಳಿ ಪ್ರತಿಭಟನೆ ಮಾಡಿದ್ದಾರೆ. ನಗರದ ಹಳೇ ಹುಬ್ಬಳ್ಳಿಯಿಂದ ಇಂಡಿ ಪಂಪ್ ವರೆಗೂ ಅಮಿತ್ ಷಾ ಶವಯಾತ್ರೆ ನಡೆಸಿದ್ದಾರೆ. ಅಮಿತ್ ಶಾ ಪ್ರತಿಕೃತಿ ಶವಯಾತ್ರೆ ಮಾಡಿ ಪ್ರತಿಭಟನೆ ಮಾಡಲಾಗಿದೆ.

ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶವ ಸಾಗಿಸುವ ವಾಹನದಲ್ಲಿ ಅಮಿತ್ ಶಾ ಪ್ರತಿಕೃತಿ ಇಟ್ಟು ಮೆರವಣಿಗೆ ಮಾಡಿದ್ದಾರೆ. ಅಂಬೇಡ್ಕರ್ ವಿರುದ್ಧ ಅವಹೇಳನ ಮಾಡಿದ ಶಾ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯ ಮಾಡಲಾಗಿದೆ.

ಚಿಕ್ಕೋಡಿಯಲ್ಲೂ ಕೇಂದ್ರ ಗೃಹ ಸಚಿವ ಅಮಿತ ಷಾ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗಿದೆ. ದಲಿತ ಸಂಘಟನೆಗಳು ಮತ್ತು ಎಸ್ ಡಿ ಪಿ ಐ ಸಂಘಟನೆಯಿಂದ ಪ್ರತಿಭಟನೆ ನಡೆಸಿದ್ದು, ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಮಾಡಿದ್ದಾರೆ.

ಅಥಣಿ – ಬೆಳಗಾವಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಚಿಕ್ಕೋಡಿ ತಹಶೀಲ್ದಾರ್ ಮೂಲಕ ಕೇಂದ್ರದ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ. ಅಮಿತ್ ಷಾ ವಿರುದ್ಧ ಪ್ರತಿಭಟನೆ ಮಾಡಿದ ಹಿನ್ನಲೆಯಲ್ಲಿ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ವಾಹನ ಸವಾರರು ಪರದಾಟ ಮಾಡುವಂತಾಯ್ತು.
