• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ

ಪ್ರತಿಧ್ವನಿ by ಪ್ರತಿಧ್ವನಿ
July 30, 2026
in Top Story, ಕರ್ನಾಟಕ, ರಾಜಕೀಯ
0
ಸೌರ ಕೃಷಿ ಪಂಪ್‌ಸೆಟ್‌ಗೆ ರೈತರ ಒಲವು: ರಾಜ್ಯದಲ್ಲಿ ಹೊಸ ದಾಖಲೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರ ಕೃಷಿಯಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ಹೆಚ್ಚಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಕಾರ್ಯಾರಂಭ ಮಾಡಿದ್ದು, ಈ ಸೌರ ಕೃಷಿ ಪಂಪ್‌ಸೆಟ್‌ಗಳಿಂದ ರಾಜ್ಯದಲ್ಲಿ ಸುಮಾರು 144 ಮೆಗಾವ್ಯಾಟ್ ಗ್ರಿಡ್ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ.

🌧️☔ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಸಂದರ್ಶನ  CS Patil | Weather Report | Heavy Rain | PRATIDHVANI

ಆರಂಭಿಕ ವರ್ಷಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಯೋಜನೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಆಸಕ್ತಿ, ನಿರಂತರ ಮೇಲ್ವಿಚಾರಣೆ ಹಾಗೂ ಆಡಳಿತಾತ್ಮಕ ಹಸ್ತಕ್ಷೇಪದಿಂದ ಹೊಸ ಚೈತನ್ಯ ದೊರೆತಿದೆ. ಇಂಧನ ಇಲಾಖೆ, ಎಸ್ಕಾಂಗಳು, ಅನುಷ್ಠಾನ ಸಂಸ್ಥೆಗಳು ಹಾಗೂ ಪೂರೈಕೆದಾರರ ಸಮನ್ವಯದಿಂದ ಅನುಷ್ಠಾನದಲ್ಲಿದ್ದ ಸಮಸ್ಯೆಗಳನ್ನು ಪರಿಹರಿಸಿದ ಬಳಿಕ ರೈತರ ಸ್ಪಂದನೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದು, ಇದು ಸೌರ ಕೃಷಿ ಪಂಪ್‌ಸೆಟ್‌ಗಳತ್ತ ರೈತರ ವಿಶ್ವಾಸ ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಅಳವಡಿಕೆಯಾಗಿ ಕಾರ್ಯಾರಂಭ ಮಾಡಿದ್ದು, 40 ಸಾವಿರ ಪಂಪ್‌ಸೆಟ್‌ಗಳ ಗುರಿಯನ್ನು ಮುಟ್ಟುವತ್ತ ವೇಗವಾಗಿ ಮುನ್ನಡೆಯುತ್ತಿದೆ.

Cabinet Expansion:  ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ.!  #pratidhvani

ಸೌರ ಕೃಷಿ ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವೇ ಶೇ.50ರಷ್ಟು ಆರ್ಥಿಕ ಸಹಾಯಧನ ನೀಡುತ್ತಿದೆ. ಇದರಿಂದ ಸಾವಿರಾರು ರೈತರು ಕಡಿಮೆ ವೆಚ್ಚದಲ್ಲಿ ಸೌರ ವಿದ್ಯುತ್ ಬಳಸಲು ಸಾಧ್ಯವಾಗಿದೆ. ಇದರಿಂದ ಸಾಂಪ್ರದಾಯಿಕ ವಿದ್ಯುತ್ ಮೇಲಿನ ಅವಲಂಬನೆಯೂ ಕಡಿಮೆಯಾಗಿದೆ.

CBI , IT , ED ಈಗ ಜೀವ ಉಳಿಸಿಕೊಂಡಿಲ್ಲ..! | Pratidhvani

ಕುಸುಮ್‌ ಬಿ ಯೋಜನೆ ಅಡಿಯಲ್ಲಿ ಅಳವಡಿಸಿರುವ ಸೌರ ಪಂಪ್‌ಸೆಟ್‌ಗಳು ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರಾತ್ರಿ ವೇಳೆ ಹೊಲಗಳಿಗೆ ತೆರಳಿ ಪಂಪ್‌ಗಳನ್ನು ಚಾಲನೆ ಮಾಡುವುದು, ನೀರಾವರಿಗಾಗಿ ಇಡೀ ರಾತ್ರಿ ಜಾಗರಣೆ ಮಾಡುವುದು ಮೊದಲಾದ ಸಮಸ್ಯೆಗಳಿಂದ ರೈತರಿಗೆ ಮುಕ್ತಿ ದೊರಕುತ್ತಿದೆ. ಹಗಲಿನ ವೇಳೆಯಲ್ಲೇ ವಿಶ್ವಾಸಾರ್ಹ ವಿದ್ಯುತ್ ಲಭ್ಯವಾಗುತ್ತಿರುವುದರಿಂದ ರೈತರ ಸುರಕ್ಷತೆ, ಅನುಕೂಲತೆ ಹಾಗೂ ಉತ್ಪಾದಕತೆ ಹೆಚ್ಚುತ್ತಿದೆ.

Siddaramaiah, ಖರ್ಗೆ, ಡಿಕೆಶಿಗೂ ನಮಸ್ಕಾರ ಮಾಡ್ತೀನಿ ರಾಜಕೀಯನೇ ಬೇರೆ ಎಂದ ಪ್ರತಾಪ್ ಸಿಂಹ

ಕಾರ್ಯಾರಂಭ ಮಾಡಿರುವ ಈ ಸೌರ ಕೃಷಿ ಪಂಪ್‌ಸೆಟ್‌ಗಳಿಂದ ರಾಜ್ಯದಲ್ಲಿ ಸುಮಾರು 144 ಮೆಗಾವ್ಯಾಟ್ ಗ್ರಿಡ್ ವಿದ್ಯುತ್ ಬೇಡಿಕೆ ಕಡಿಮೆಯಾಗಿದೆ. ಇದರೊಂದಿಗೆ ವರ್ಷಕ್ಕೆ 240 ಮಿಲಿಯನ್ ಯೂನಿಟ್ ವಿದ್ಯುತ್ ಖರೀದಿಯನ್ನು ತಪ್ಪಿಸುವ ಮೂಲಕ ಎಸ್ಕಾಂಗಳಿಗೆ ಸುಮಾರು ₹146 ಕೋಟಿ ವಿದ್ಯುತ್ ಖರೀದಿ ವೆಚ್ಚ ಉಳಿತಾಯವಾಗಲಿದೆ. ಜೊತೆಗೆ, ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ವಿದ್ಯುತ್ ಸಹಾಯಧನದಲ್ಲಿ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹200 ಕೋಟಿ ಉಳಿತಾಯ ಆಗಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ ಜಾರ್ಜ್‌, “ಕರ್ನಾಟಕದ ಸೌರ ಕೃಷಿ ಕ್ರಾಂತಿ ಸುಸ್ಥಿರ ಕೃಷಿ ಹಾಗೂ ಉತ್ತಮ ಆಡಳಿತಕ್ಕೆ ಹೊಸ ಮಾದರಿಯಾಗಿದೆ. ಯೋಜನೆಯ ಅನುಷ್ಠಾನದಲ್ಲಿದ್ದ ಅಡೆತಡೆಗಳನ್ನು ನಿವಾರಿಸಿ, ಪ್ರಕ್ರಿಯೆಯನ್ನು ಸರಳಗೊಳಿಸಿ ಹೊಸ ವೇಗ ನೀಡಿದ್ದೇವೆ. ಪ್ರತಿಯೊಂದು ಸೌರ ಕೃಷಿ ಪಂಪ್‌ಸೆಟ್ ಕರ್ನಾಟಕದ ಭವಿಷ್ಯಕ್ಕೆ ಮಾಡುವ ಶಾಶ್ವತ ಹೂಡಿಕೆಯಾಗಿದೆ. ಇದು ರಾಜ್ಯದ ವಿದ್ಯುತ್ ಖರೀದಿ ವೆಚ್ಚವನ್ನು ಕಡಿಮೆ ಮಾಡುತ್ತದೆ, ವಿದ್ಯುತ್ ಸಹಾಯಧನದ ಹೊರೆ ತಗ್ಗಿಸುತ್ತದೆ, ಇಂಧನ ಭದ್ರತೆಯನ್ನು ಬಲಪಡಿಸುತ್ತದೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುತ್ತದೆ. ಇದು ಕೇವಲ ನವೀಕರಿಸಬಹುದಾದ ಇಂಧನ ಯೋಜನೆಯಲ್ಲ; ರಾಜ್ಯದ ಆರ್ಥಿಕ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿಯಾಗಿರುವ ಮಹತ್ವದ ಕಾರ್ಯಕ್ರಮವಾಗಿದೆ.” ಎಂದು ತಿಳಿಸಿದ್ದಾರೆ.

Anti Question Paper Bill Discussion In Parliament: ಕೇಂದ್ರದ ಶಿಕ್ಷಣ ಸಮಿತಿ ಬಗ್ಗೆ ಮಾತನಾಡುತ್ತಾ ಹಾಸ್ಯ
Tags: Energy DepartmentK.J GeorgeKarnatakaKarnataka PoliticsPower Department
Previous Post

ಮಧ್ಯಪ್ರಾಚ್ಯ ಯುದ್ಧದ ಕಾರ್ಮೋಡ, ದೇಶದಲ್ಲಿ ಇಂಧನ ಅಭದ್ರತೆ..? ; ತುರ್ತು ಹೈವೋಲ್ಟೇಜ್‌ ಸಂಪುಟ ಸಭೆ ನಡೆಸಿದ ಪ್ರಧಾನಿ ಮೋದಿ..

Next Post

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

BREAKING NEWS : ಕರ್ನಾಟಕಕ್ಕೆ ಕಾವೇರಿ ಆಘಾತ : ತಮಿಳುನಾಡಿಗೆ ಮತ್ತೆ ನೀರು ಹರಿಸಲು ಆದೇಶ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada