ಚೀನಾದ ಸ್ಮಾರ್ಟ್ ಫೋನ್ ಕಂಪನಿ ದೈತ್ಯ ಕ್ಸಿಯೊಮಿಯ 5551 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ವಿದೇಶೀ ವಿನಿಮಯ ನಿರ್ವಹಣಾ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಫೆಮಾ ಕಾಯ್ದೆಯಡಿ ಕೇಂದ್ರ ಜಾರಿ ನಿರ್ದೇಶನಾಲಯ 5551.27 ಕೋಟಿ ರೂ. ವಶಕ್ಕೆ ಪಡೆದಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಲಾಗಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದ ಜಾರಿ ನಿರ್ದೇಶನಾಲಯ ಶನಿವಾರ ದಾಳಿ ಮಾಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.