ಕಳೆದ ಮೂರು ಅವಧಿಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಆಯ್ಕೆಯಾಗಿರುವ ಪಿ.ಸಿ. ಮೋಹನ್ಗೆ ಈ ಬಾರಿ ಚಿಕ್ಕಬಳ್ಳಾಪುರ ಕ್ಷೇತ್ರದತ್ತ ಗಮನಹರಿಸಲು ಹೈಕಮಾಂಡ್ ನಾಯಕರು ಸೂಚಿಸಿದ್ದು, ಬಲಿಜ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ, ಚಿಕ್ಕಬಳ್ಳಾಪುರಕ್ಕೆ ತೆರಳಲು ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ.ಮೋಹನ್ಗೆ ಹೈಕಮಾಂಡ್ ನಾಯಕರು ಶಾಕ್ ಕೊಟ್ಟಿದ್ದಾರೆ. ಕಳೆದೆರೆಡು ದಿನಗಳ ಹಿಂದೆ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಪಿ.ಸಿ. ಮೋಹನ್ಗೆ ದೂರವಾಣಿ ಕರೆ ಮಾಡಿದ ಹೈಕಮಾಂಡ್ ನಾಯಕರು, ಮುಂದಿನ ಲೋಕದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ವಲಸೆ ಹೋಗಲು ಸಿದ್ಧರಾಗಿ ಎಂಬ ಸಂದೇಶವನ್ನು ರವಾನೆ ಮಾಡಿದ್ದಾರೆ.
