• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾದಯಾತ್ರೆ ಯಾವ ಪುರುಷಾರ್ಥಕ್ಕೆ..? ಉದ್ದೇಶ ಸರಿ ಇದೆಯಾ..?

ಕೃಷ್ಣ ಮಣಿ by ಕೃಷ್ಣ ಮಣಿ
August 8, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ಪಾದಯಾತ್ರೆ ಯಾವ ಪುರುಷಾರ್ಥಕ್ಕೆ..? ಉದ್ದೇಶ ಸರಿ ಇದೆಯಾ..?
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್‌ ಹಾಗು ಬಿಜೆಪಿ ಜಿದ್ದಿಗೆ ಬಿದ್ದಂತೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಜೆಡಿಎಸ್‌ ಮೈತ್ರಿ ನಾಯಕರು ಒಂದು ಕಡೆಯಿಂದ ಪಾದಯಾತ್ರೆ ನಾಡುತ್ತಾ ಸಾಗುತ್ತಿದೆ. ಕಾಂಗ್ರೆಸ್‌ ನಾಯಕರು ಒಂದು ದಿನ ಮುಂಚೆಯೇ ಜನಾಂದೋಲನ ಸಭೆ ಮಾಡುತ್ತಾ ವಿರೋಧ ಪಕ್ಷಗಳಿಗೆ ಪ್ರಶ್ನೆಗಳನ್ನು ಮಾಡುತ್ತಾ ಮುಜುಗರ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಮಾರನೆ ದಿನ ಮೈತ್ರಿ ನಾಯಕರು ಉತ್ತರದ ಜೊತೆಗೆ ಮರು ಪ್ರಶ್ನೆ ಮಾಡುತ್ತ ಇದೀಗ ಮಂಡ್ಯ ತಲುಪಿದ್ದಾರೆ. ಆದರೆ ವಿರೋಧ ಪಕ್ಷಗಳು ಹಾಗು ಸ್ವತಃ ಆಡಳಿತರೂಢ ಕಾಂಗ್ರೆಸ್‌ ಪಕ್ಷದ ಪಾದಯಾತ್ರೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ಯಾ..? ಅನ್ನೋ ಅನುಮಾನ ಮೂಡುವಂತೆ ಮಾಡುತ್ತಿದೆ.

ADVERTISEMENT

ವಿರೋಧ ಪಕ್ಷಗಳ ನಾಯಕರು ಮುಡಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮುಡಾದಲ್ಲಿ ಸಿಎಂ ಪತ್ನಿಗೆ 14 ಸೈಟ್‌ಗಳನ್ನು ಕೊಡಲಾಗಿದೆ ಎನ್ನುವುದು ಬಿಜೆಪಿ ನಾಯಕರ ಆರೋಪ. ಆದರೆ ಆ ಸೈಟ್‌ಗಳನ್ನು ಕೊಟ್ಟಿದ್ದು ಯಾವ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಸರ್ಕಾರ ಇದ್ದಾಗ ತಾವೇ ಸೈಟ್‌ಗಳನ್ನು ಕೊಟ್ಟು ಇದೀಗ ವಿರೋಧ ಪಕ್ಷಕ್ಕೆ ಬಂದಾಗ ಆರೋಪ ಮಾಡುತ್ತಾ ಪಾದಯಾತ್ರೆ ಮಾಡುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಮೂಡುತ್ತದೆ. ಸಿದ್ದರಾಮಯ್ಯ ಪತ್ನಿಗೆ ಸೈಟ್‌ ಕೊಟ್ಟಿರುವುದು ಅಕ್ರಮವಾಗಿದ್ದರೆ ಅದನ್ನು ವಾಪಸ್‌ ಪಡೆದುಕೊಳ್ಳಲು ಯಾವುದೇ ಸಮಸ್ಯೆ ಇಲ್ಲ. ಆದರೆ ವ್ಯಕ್ತಿ ತೇಜೋವಧೆ ಮಾಡುತ್ತ ಪಾದಯಾತ್ರೆ ಮಾಡುತ್ತಿರುವುದು ಸರಿಯಲ್ಲ ಎನಿಸುತ್ತದೆ.

ಒಂದು ಸರ್ಕಾರ ಆಡಳಿತ ನಡೆಸುವಾಗ ಪ್ರಶ್ನೆ ಮಾಡುವ ಅವಕಾಶ ಕಳೆದುಕೊಳ್ಳುತ್ತದೆ. ಆ ಪ್ರಶ್ನೆಗೆ ಉತ್ತರವನ್ನು ಹೇಳುವ ಜವಾಬ್ದಾರಿ ಆ ಸರ್ಕಾರದ ಮೇಲೆಯೇ ಇರುತ್ತದೆ. ಹಾಗಾಗಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ಮಾಡುತ್ತ ಊರಿಂದ ಊರಿಗೆ ಹೋಗುವುದು ಕೂಡ ಅಸಹ್ಯಕರವಾಗಿದೆ. ವಿರೋಧ ಪಕ್ಷಗಳ ಮೇಲೆ ಆರೋಪ ಮಾಡುವ ಉಪಮುಖ್ಯಮಂತ್ರಿಗಳು ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಹಾಕುವ ಕೆಲಸ ಮಾಡಬೇಕೇ ಹೊರತು, ಆರೋಪ ಮಾಡುವುದು ತರವೇ..? ಕಾಂಗ್ರೆಸ್‌ ಪಕ್ಷ ಗೃಹಲಕ್ಷ್ಮೀ ಯೋಜನೆಯ ಹಣ ಹಾಕಿಲ್ಲ ಎಂದು ಎಲ್ಲಾ ಸಭೆಗಳಲ್ಲೂ ಜನರು ಕಿಡಿಕಾರುತ್ತಿದ್ದಾರೆ. ಹೀಗಿರುವಾಗ ವಿರೋಧ ಪಕ್ಷಗಳ ವಿರುದ್ಧ ಜನಾಂದೋಲನ ಸಭೆ ನಿರಾರ್ಥಕ ಎನ್ನಬಹುದು.

ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದಾರೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ಆಗಿದೆ ಎಂದು. ಆದರೆ ವಿರೋಧ ಪಕ್ಷಗಳ ಪಾದಯಾತ್ರೆ ಮುಡಾ ಕಡೆಗೆ ಸಾಗಿದೆ. ಅದರ ಬದಲು ವಾಲ್ಮೀಕಿ ನಿಗಮದ ಹಗರಣದ ತನಿಖೆ ಹಾಗು ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ಆಗ್ರಹ ಮಾಡಿದ್ದರೆ ಒಳಿತಾಗುತ್ತಿತ್ತು. ರಾಜ್ಯದ ಜನರ ತೆರಿಗೆ ಹಣವಾದರೂ ಬರುವ ಸಾಧ್ಯತೆ ಇತ್ತು. ಆದರೆ ವಿರೋಧ ಪಕ್ಷಗಳಿಗೆ ಸರ್ಕಾರ ಒಪ್ಪಿಕೊಂಡಿರುವ ಹಗರಣದ ಮೇಲೆ ಆಸಕ್ತಿಯೇ ಇಲ್ಲದಂತಾಗಿದೆ. ಉಪಮುಖ್ಯಮಂತ್ರಿ ವಿರೋಧ ಪಕ್ಷಗಳನ್ನು ಕೆಣಕುತ್ತಾ ಮುಡಾ ಕಡೆಗೆ ಹೆಜ್ಜೆ ಹಾಕುವಂತೆ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿಯ ತಾಳಕ್ಕೆ ತಕ್ಕಂತೆ ವಿರೋಧ ಪಕ್ಷಗಳು ಹೋರಾಟ ನಡೆಯುತ್ತಿದೆ ಎನ್ನುವ ಆರೋಪವೂ ಇದೆ. ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯುತ್ತದೆ ಅನ್ನೋದನ್ನು ಕಾದು ನೋಡ್ಬೇಕು. ಸದ್ಯಕ್ಕಂತ ಹೋರಾಟ ದಿಕ್ಕು ತಪ್ಪಿದೆ ಅನ್ನೋದು ಸತ್ಯ.

ಕೃಷ್ಣಮಣಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸೆಟ್ ಬಾಯ್ ಸುನೀಲ್ ಕೈಯಲ್ಲಿ ಕ್ಲ್ಯಾಪ್ ಮಾಡಿಸಿದ ಯಶ್..!

Next Post

ಮೋದಿ,ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ..!

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ಮರುಕಳಿಸಿದ ಪ್ರತ್ಯೇಕ ಮತದಾರರ ಪರಂಪರೆ

ಮರುಕಳಿಸಿದ ಪ್ರತ್ಯೇಕ ಮತದಾರರ ಪರಂಪರೆ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
Next Post

ಮೋದಿ,ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada