ಬೆಂಗಳೂರು (Bengaluru): ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವಾಗಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ದಿಂದ ತನಿಖೆ ನಡೆಸುವಂತೆ ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ( Shobha Karandlaje ) ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ (Amit Shah) ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್‌ನ ನಾಸೀರ್ ಹುಸೇನ್ ನ ಬೆಂಬಲಿಗರು ವಿಜಯೋತ್ಸವದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು.

ಕರ್ನಾಟಕದ ವಿಧಾನಸೌಧದಲ್ಲಿ ಇಂತಹ ಘಟನೆ ನಡೆದಿದೆ. ಇಲ್ಲಿಯ ತನಿಖಾ ತಂಡಗಳ ಕಡೆಯಿಂದ ತನಿಖೆ, ವಿಚಾರಣೆ ಮಾಡಿಸಿದ್ರೆ ನ್ಯಾಯ ಸಿಗುವುದು ಅನುಮಾನ. ಇಲ್ಲಿನ ತನಿಖಾ ತಂಡಗಳಿಗೆ ಸ್ಥಳೀಯ ಸರ್ಕಾರ ಒತ್ತಡ ಹೇರಬಹುದು.
ಹೀಗಾಗಿ ಕೇಂದ್ರದ ಗೃಹ ಇಲಾಖೆ ಮಧ್ಯೆ ಪ್ರವೇಶಿಸಿ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ (NIA) ಗೆ ವಹಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿ ಪತ್ರ ಬರೆದಿದ್ದಾರೆ.
ವಿಧಾನಸೌಧದಲ್ಲಿ ಭದ್ರತಾ ಲೋಪ ಆಗಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಅಗತ್ಯ ಇದೆ. ಹೀಗಾಗಿ ಪ್ರಕರಣವನ್ನು ಎನ್ಐಎಗೆ ವಹಿಸುವುದು ಸೂಕ್ತ ಎಂದು ಶೋಭಾ ಕರಂದ್ಲಾಜೆ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
#Karnataka #bengaluru #shobhakarandlaje #amitshah #nia