ಇತ್ತೀಚೆಗೆ ಭಾರೀ ಮಳೆಯಿಂದ ತತ್ತರಿಸಿದ ಪಾಕಿಸ್ತಾನ ಇದೀಗ ಮತ್ತೊಂದು ಪ್ರವಾಹದ ಭೀತಿಗೆ ಸಿಲುಕಿದ್ದು, ಕಳೆದ ಬಾರಿಗಿಂತ ಈ ಬಾರಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
ಭಾರೀ ಮಳೆಯಿಂದಾಗಿ ಪಾಕಿಸ್ತಾನದ ಮೂರನೇ ಒಂದು ಭಾಗ ಭೂ ಪ್ರದೇಶ ಮುಳುಗಡೆ ಆಗಿದ್ದು, 1500ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಈ ಬಾರಿಯ ಪ್ರವಾಹ ಪರಿಸ್ಥಿತಿ ಇನ್ನಷ್ಟು ಭೀಕರವಾಗಲಿದ್ದು, ಸಾವಿನ ಸಂಖ್ಯೆ ಕಳೆದ ಬಾರಿಗಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಈಗಾಗಲೇ ಪಾಕಿಸ್ತಾನದ ಕೆಲವು ಭಾಗಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಅಲ್ಲದೇ ನೆರೆಯ ಭಾರತದಲ್ಲಿ ಕೂಡ ಮಳೆಯಾಗುತ್ತಿದ್ದು, ಇದರಿಂದ ಪಾಕಿಸ್ತಾನಕ್ಕೆ ಹರಿದು ಬರುವ ಪ್ರಮುಖ ನದಿಗಳ ಬಗ್ಗೆ ಗಮನ ಹರಿಸಲಾಗುತ್ತಿದೆ.

ಭದ್ರತಾ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ನದಿ ಪಾತ್ರದಲ್ಲಿನ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ಆರಂಭಿಸಿದ್ದಾರೆ.
ಸದ್ಯಕ್ಕೆ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಆದರೆ ಹವಾಮಾನ ವೈಪರಿತ್ಯ ದೊಡ್ಡ ಸಮಸ್ಯೆ ತಂದಿದ್ದು, ಉತ್ತರ ಭಾರತದಲ್ಲಿ ಮಳೆಯಾದರೆ ಅಲ್ಲಿಂದ ಹರಿದು ಬರುವ ನೀರು ಪಾಕಿಸ್ತಾನದ ಸಂಕಷ್ಟ ಹೆಚ್ಚಿಸಲಿದೆ.