ಭಾರೀ ಮಳೆಯಿಂದ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಸಾವಿರಕ್ಕೂ ಅಧಿಕ ಜನರು ಮೃತಪಟ್ಟು, 10 ಸಾವಿರಕ್ಕೂ ಅಧಿಕ ನಾಗರಿಕರು ಸ್ಥಳಾಂತರಗೊಳಿಸಲಾಗಿದೆ.
ಉತ್ತರ ಪಾಕಿಸ್ತಾನದ ಖೈಬರ್ ಪಂಕ್ತುಕುವಾ ಪ್ರದೇಶದ ಕಾಬೂಲ್ ನದಿ ರಾತ್ರೋರಾತ್ರಿ ತುಂಬಿ ಹರಿದಿದ್ದರಿಂದ ಸೇತುವೆಗಳು ಮುಳುಗಡೆಯಾಗಿದ್ದು, ಹಲವಾರು ಜಿಲ್ಲೆಗಳು ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ.

ಛರಸಡ ಜಿಲ್ಲೆಯೊಂದರಲ್ಲೇ ಸುಮಾರು 1,80,000 ಜನರು ಮನೆ ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳಿದ್ದಾರೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸುಮಾರು 3 ಕೋಟಿ ಜನರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನದ ಸೇನೆ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಸಾಮಾನ್ಯಕ್ಕಿಂತ ಶೇ.784ರಷ್ಟು ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಮಳೆಯ ಅಬ್ಬರದಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಹುಮಹಡಿ ಕಟ್ಟಡಗಳು ಸಮೇತ ಕುಸಿಯುತ್ತಿವೆ.