ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯುವ ಏಷ್ಯಾಕಪ್ ಆಡಲು ಭಾರತ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಬದಲಾಗಿ ಟೂರ್ನಿಯನ್ನು ತಟಸ್ಥ ಸ್ಥಳದಲ್ಲಿ ಆಯೋಜಿಸಬೇಕು ಎಂದು ಸೋಮವಾರ ಹೇಳಿಕೆ ನೀಡಿದ ಬಿಸಿಸಿಐ ಕಾರ್ಯದರ್ಶಿ ಹಾಗೂ ಏಷ್ಯಾ ಕ್ರಿಕೆಟ್ ಆಡಳಿತ ಮಂಡಳಿ ಅಧ್ಯಕ್ಷ ಜಯ್ ಶಾ ವಿರುದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಶಾಹಿದ್ ಅಫ್ರಿದಿ ಭಾರತಕ್ಕೆ ಆಡಳಿತದ ಅನುಭವದ ಕೊರತೆ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಎರಡು ತಂಡಗಳ ನಡುವೆ ಉತ್ತಮ ಬಾಂಧವ್ಯ ಹಾಗೂ ಒಡನಾಟ ಕಂಡು ಬಂದಿದೆ ಹೀಗಿರುವಾಗಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟಿ-20 ವಿಶ್ವಕಪ್ ಸಮಯದಲ್ಲಿ ಈ ರೀತಿ ಹೇಳಿಕೆಗಳನ್ನು ನೀಡುವುದು ಭಾರತದಲ್ಲಿ ಕ್ರಿಕೆಟ್ ಆಡಳಿತದಲ್ಲಿ ಅನುಭವ ಕೊರತೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿ ವೀಕ್ಷಕ ವಿವರಣೆಗಾರ ರಮಿಜ್ ರಾಜಾ ಒಂದು ವೇಳ ಭಾರತ ಮುಂದಿನ ವರ್ಷದ ಏಷ್ಯಾಕಪ್ ಟೂರ್ನಿಯಿಂದ ಹಿಂದೆ ಸರಿದರೆ ನಾವು ಭಾರತದಲ್ಲಿ ನಡೆಯುವ ಎಕದಿನ ವಿಶ್ವಕಪ್ ಅನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.
2008ರಲ್ಲಿ ಭಾರತ ಕಡೆಯದಾಗಿ ಪಾಕಿಸ್ತಾನಕ್ಕೆ ಏಷ್ಯಾಕಪ್ ಆಡಲು ಬಂದಿತ್ತು. 2012ರಲ್ಲಿ ಭಾರತದಲ್ಲಿ ಪಾಕಿಸ್ತಾನ ಕಡೆಯದಾಗಿ ದ್ವಿಪಕ್ಷೀಯ ಸರಣಿಯನ್ನು ಆಡಿತ್ತು. ಅದಾದ ನಂತರ ಉಭಯ ದೇಶಗಳ ನಡುವಿನ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯುತ್ತಿವೆ ಎಂದಿದ್ದಾರೆ.