• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಪ್ರಾರಂಭವಾಯ್ತು ಪ್ಯಾನ್ ಇಂಡಿಯಾ ಸಿನಿಮಾ ‘ಜಂಟಲ್ ಮ್ಯಾನ್ 2’

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಸಿನಿಮಾ
0
ಜಂಟಲ್‌ ಮ್ಯಾನ್‌ 2
Share on WhatsAppShare on FacebookShare on Telegram

ತಮಿಳಿನಲ್ಲಿ ‘ಜಂಟಲ್ ಮ್ಯಾನ್’, ‘ಕಾದಲನ್’, ‘ಕಾದಲ್ ದೇಶಂ’ ಸೇರಿದಂತೆ ದೊಡ್ಡ ಬಜೆಟ್ ನ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಹಿರಿಯ ನಿರ್ಮಾಪಕ ಕೆ.ಟಿ. ಕುಂಜುಮೋನ್ ನಿರ್ಮಿಸುತ್ತಿರುವ ‘ಜಂಟಲ್ ಮ್ಯಾನ್ 2’ Jantal Man 2) ಚಿತ್ರವು ಶನಿವಾರ (ಆಗಸ್ಟ್ 19) ಚೆನ್ನೈನಲ್ಲಿ ಅದ್ದೂರಿಯಾಗಿ ಪ್ರಾರಂಭವಾಗಿದೆ.

ADVERTISEMENT

ಚೆನ್ನೈನ ರಾಜ ಮುತ್ತಯ್ಯ ಸಭಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿರ್ದೇಶಕ ಗೋಕುಲ್ ಕೃಷ್ಣ ಅವರಿಗೆ ನಿರ್ಮಾಪಕ ಕುಂಜುಮೋನ್, ಚಿತ್ರದ ಸ್ಕ್ರಿಪ್ಟ್ ಹಸ್ತಾಂತರಿಸುವ ಮೂಲಕ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

ಆರ್‌ಆರ್‌ಆರ್ ಚಿತ್ರದ ‘ನಾಟು ನಾಟು’ ಗೀತೆಗೆ ಆಸ್ಕರ್ ಪ್ರಶಸ್ತಿ ಪಡೆದ ಪದ್ಮಶ್ರೀ ಎಂ.ಎಂ. ಕೀರವಾಣಿ (M.M.Keeravani) ಅವರು ಜಂಟಲ್‌ ಮ್ಯಾನ್ 2 ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಚಿತ್ರಸಾಹಿತಿ ವೈರಮುತ್ತು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಜಂಟಲ್‌ ಮ್ಯಾನ್‌ 2
ಜಂಟಲ್‌ ಮ್ಯಾನ್‌ 2 ಚಿತ್ರ ಆರಂಭ ಸಮಾರಂಭ

ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಕೆ.ಟಿ. ಕುಂಜುಮೋನ್, “ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಜೆಂಟಲ್ ಮ್ಯಾನ್ ಗಳಾಗಿರಬೇಕು ಎಂಬುದು ಈ ಚಿತ್ರದ ಆಶಯ. ನಾನು ಇದುವರೆಗೂ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಿಸಿದ್ದೇನೆ. ನನಗೆ ಪ್ರೇಕ್ಷಕರ ನಾಡಿಮಿಡಿತ ಗೊತ್ತಿದೆ. ಅದಕ್ಕೆ ತಕ್ಕ ಹಾಗೆ ಸಿನಿಮಾ ಮಾಡುತ್ತಿದ್ದೇವೆ. ನನಗೆ ಪ್ರೇಕ್ಷಕರು ಗುರುಸಮಾನರು. ಅವರು ಚಿತ್ರ ನೋಡಿ ಆಶೀರ್ವಾದ ಮಾಡಿದರಷ್ಟೇ ನಾವು ಗೆಲ್ಲುವುದಕ್ಕೆ ಸಾಧ್ಯ. ಹಾಗಾಗಿ, ಅವರಿಗೆ ಇಷ್ಟವಾಗುವಂತಹ ಚಿತ್ರ ಮಾಡುವುದು ನನ್ನ ಮೊದಲ ಆದ್ಯತೆ” ಎಂದರು.

ಈ ಸುದ್ದಿ ಓದಿದ್ದೀರಾ? ರೂಪೇಶ್ ಶೆಟ್ಟಿಗೆ ಜೋಡಿಯಾದ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ

ಈ ಚಿತ್ರ ಮಾಡುವುದಕ್ಕೆ ಎಂ.ಎಂ. ಕೀರವಾಣಿ ಅವರು ಮುಖ್ಯ ಕಾರಣ ಎಂದ ಕುಂಜುಮೋನ್, “ಈ ಚಿತ್ರಕ್ಕೆ ಸಂಗೀತ ಸಂಯೋಜಿಸಬೇಕು ಎಂದು ನಾನು ಅವರ ಬಳಿ ಕೇಳಿಕೊಂಡಾಗ, ಹೈದರಾಬಾದ್ ಗೆ ಬರುವುದಕ್ಕೆ ಹೇಳಿದರು. ನಾನು ಹೈದರಾಬಾದ್ ಗೆ ಹೋಗಿ ಅವರನ್ನು ಭೇಟಿ ಮಾಡಿದೆ. ಅವರು ಚಿತ್ರದ ತಾರಾಗಣದ ಬಗ್ಗೆಯಾಗಲೀ, ತಂತ್ರಜ್ಞರ ಬಗ್ಗೆಯಾಗಲೀ ಒಂದೇ ಒಂದು ಮಾತನ್ನೂ ಕೇಳಲಿಲ್ಲ. ಅಡ್ವಾನ್ಸ್ ಸಹ ಪಡೆಯಲಿಲ್ಲ. ಈ ಚಿತ್ರವನ್ನು ನಿಮಗಾಗಿ ಮಾಡುತ್ತಿದ್ದೇನೆ ಎಂದರು. ಅದೇ ರೀತಿ ಹಿರಿಯ ಚಿತ್ರಸಾಹಿತಿ ವೈರಮುತ್ತು ಸಹ ಅಡ್ವಾನ್ಸ್ ಪಡೆಯಲಿಲ್ಲ. ತಮಗೆ ಅವಶ್ಯಕತೆ ಇದ್ದಾಗ ಕೇಳುವುದಾಗಿ ಹೇಳಿದರು. ಅಷ್ಟೇ ಅಲ್ಲ, ಕೊಚ್ಚಿಯಲ್ಲಿ ನಡೆದ ಸಂಗೀತ ಸಂಯೋಜನೆಗೂ ಅವರು ತಮ್ಮ ದುಡ್ಡಿನಲ್ಲೇ ಬರುವುದಾಗಿ ಹೇಳಿದರು. ಅವರ ಗುಣ ನೋಡಿ ಹೃದಯ ತುಂಬಿಬಂತು” ಎಂದು ಹೇಳಿದರು.

ಜಂಟಲ್ ಮ್ಯಾನ್ 2 ಚಿತ್ರದಲ್ಲಿ ನಾಯಕನಾಗಿ ಚೇತನ್ ಚೀನು ಅಭಿನಯಿಸುತ್ತಿದ್ದು, ಅವರಿಗೆ ನಾಯಕಿಯರಾಗಿ ನಯನತಾರಾ ಚಕ್ರವರ್ತಿ ಹಾಗೂ ಪ್ರಿಯಾ ಲಾಲ್ ಅಭಿನಯಿಸುತ್ತಿದ್ದಾರೆ. ಮಿಕ್ಕಂತೆ ಕನ್ನಡ ನಟಿ ಸುಧಾರಾಣಿ, ಸಿತಾರಾ, ಸುಮನ್, ಸತ್ಯಪ್ರಿಯಾ ಸೇರಿದಂತೆ ಬೇರೆಬೇರೆ ಭಾಷೆಗಳ ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಅಜಯನ್ ವಿನ್ಸೆಂಟ್ ಅವರ ಛಾಯಾಗ್ರಹಣ, ತೋಟ ತಾರಿಣಿ ಅವರ ಕಲಾ ನಿರ್ದೇಶನವಿದೆ.

Tags: Jantal Man 2MM KeeravaniNayanatarapan india filmRRRsudharaniಎಂ.ಎಂ.ಕೀರವಾಣಿಜಂಟಲ್‌ ಮ್ಯಾನ್‌ 2ನಯನತಾರಾಪ್ಯಾನ್‌ ಇಂಡಿಯಾ ಸಿನಿಮಾಸುಧಾರಾಣಿ
Previous Post

ರಾಧನಾ ರಾಮ್ ಇನ್ಮುಂದೆ ಆರಾಧನಾ

Next Post

ರಾಜೀವ್‌ ಗಾಂಧಿ ಜನ್ಮ ದಿನ | ರಾಹುಲ್‌, ಸೋನಿಯಾ ಪುಷ್ಪನಮನ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ರಾಜೀವ್‌ ಗಾಂಧಿ ಜನ್ಮದಿನ

ರಾಜೀವ್‌ ಗಾಂಧಿ ಜನ್ಮ ದಿನ | ರಾಹುಲ್‌, ಸೋನಿಯಾ ಪುಷ್ಪನಮನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada