ರಾಜ್ಯದಲ್ಲಿ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನೆಲೆಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ವಷಾ೯ಚರಣೆ ಕಾಯ೯ಕ್ರಮ ಮುಂದೂಡಿಕೆ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಜನೆವರಿ 14 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಕಾರ್ಯಕ್ರಮ ಮುಂದುಡಲಾಗಿದೆ ಎಂದು ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ವಷಾ೯ಚರಣೆ ಜೊತೆಗೆ ರಾಷ್ಟ್ರೀಯ ಬಸವ ಕೃಷಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಬೇಕಿತ್ತು. ಅಂದಾಜು 2 ಲಕ್ಷ ಜನರು ಸೇರಬೇಕಿದ್ದ ಕಾರ್ಯಕ್ರಮವಾಗಿತ್ತು. ಆದರೆ ಕೋವಿಡ್ ಹಿನ್ನೆಲೆ ತಾತ್ಕಾಲಿಕ ಮುಂದೂಡಿಕೆ ಎಂದಿದ್ದಾರೆ.
ಕಾರ್ಯಕ್ರಮದ ಬದಲಾಗಿ ಪಂಚಮಸಾಲಿ ಸಮುದಾಯದವರ ಮನೆ ಮನೆಗಳಲ್ಲಿಯೇ 2 ಎ ಮೀಸಲಾತಿ ಹೋರಾಟದ ವರ್ಷಾಚರಣೆ ಆಚರಿಸಲು ಸ್ವಾಮೀಜಿ ಕರೆ ನೀಡಿದ್ದಾರೆ. ಕೋವಿಡ್ ಸಡಿಲಗೊಂಡ ಬಳಿಕ ಮೀಸಲಾತಿ ಹೋರಾಟ ಮತ್ತು ಕಾರ್ಯಕ್ರಮ ಆಯೋಜಿಸಲು ನಿರ್ಧಾರ ಮಾಡಲು ತೀರ್ಮಾನಿಸಲಾವಿದೆ ಎಂದು ಸ್ವಾಮೀಜಿ ತಿಳಿಸಿದರು.