• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ : ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
March 18, 2023
in Top Story, ಕರ್ನಾಟಕ, ರಾಜಕೀಯ
0
ಮಾ.26ಕ್ಕೆ ಮೈಸೂರಿನಲ್ಲಿ ಪಂಚರತ್ನ ಸಮಾರೋಪ :  ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ ; ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಮಾ.18. ಶಾಸಕರ ಸಲಹೆಯ ಮೇರೆಗೆ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶಕ್ಕೆ ಕುಂಬಳಗೋಡಿನಿಂದ ರೋಡ್ ಬದಲು ಸಮಾವೇಶದ ಸ್ಥಳಕ್ಕೆ ನಾಲ್ಕು ಕೀ.ಮಿ ದೂರ ಮಾತ್ರ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರನ್ನು ಕರೆದುಕೊಂಡು ಹೋಗಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾವೇಶದ ಪೂರ್ವಸಿದ್ಧತೆ ಬಗ್ಗೆ ಶಾಸಕರು, ಪಕ್ಷದ ತಾಲ್ಲೂಕು, ಜಿಲ್ಲಾ ಅಧ್ಯಕ್ಷರು ಹಾಗೂ ಅಭ್ಯರ್ಥಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ವಿಷಯ ತಿಳಿಸಿದರು. ಸಮಾರೋಪ ಸಮಾವೇಶದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ವೈದ್ಯರು ಹಾಗೂ ಎಲ್ಲ ಶಾಸಕರ ಸಲಹೆಯ ಮೇರೆಗೆ ಸಮಾರೋಪ ಸಮಾವೇಶದ ರೋಡ್ ಶೋ ವನ್ನು ನಾಲ್ಕು ಕೀ. ಮೀ ಗೆ ಸೀಮಿತಗೊಳಿಸಲಾಗಿದೆ ಎಂದರು.

ಈ ತಿಂಗಳ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಈಗಾಗಲೇ ಎಲ್ಲಾ ರೀತಿಯ ಸಿದ್ದತೆ ಆಗಿದೆ. ಶ್ರೀ ಚಾಮುಂಡೇಶ್ವರಿ ಸನ್ನಿದಾನದಲ್ಲಿ ತಾಯಿ ಆಶಿರ್ವಾದ ಇರಲಿ ಅಂತಲೇ ಅಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದರು. ಪಂಚರತ್ನ ರಥಯಾತ್ರೆ ರಾಜ್ಯದ 85ಕ್ಷೇತ್ರದಲ್ಲಿ ಪೂರ್ಣಗೊಳಿಸಿದ್ದೇನೆ. ಎಲ್ಲೆಡೆ ಉತ್ತಮ ಜನ ಸ್ಪಂದನೆ ಸಿಕ್ಕಿದೆ ಎಂದು ಅವರು ತಿಳಿಸಿದರು.

ಬಿಜೆಪಿಗೆ ನೈತಿಕತೆ ಅನ್ನುವುದು ಇಲ್ಲ:

ರೌಡಿಶೀಟರ್ ಸೈಲೆಂಟ್ ಸುನೀಲ ಬಿಜೆಪಿ ಪಕ್ಷದ ಅಧಿಕೃತ ಸದಸ್ಯತ್ವ ಪಡೆದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಮಾಜಿ ಮುಖ್ಯಮಂತ್ರಿ ಅವರು; ಸೈಲೆಂಟ್ ಸುನೀಲ, ಸ್ಯಾಂಟ್ರೋ ರವಿ, ಫೈಟರ್ ರವಿ ಅಂತವರೇ ಬಿಜೆಪಿಗೆ ಸೇರಿಕೊಳ್ಳೋದು. ಇವರಿಗೆ ಪ್ರಾಮುಖ್ಯತೆ ಕೊಡೋದು ಬೇಡ ಎನ್ನುವುದು ಅಭಿಪ್ರಾಯ ಎಂದರು.

ಬಿಜೆಪಿಯವರು ನೈತಿಕತೆ ಭಾಷಣ ಮಾಡುತ್ತಾರೆ. ಅದರ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ. ಜನ ಇಂತವರ ಬಗ್ಗೆ, ಇಂಥ ಪಕ್ಷಗಳ ಬಗ್ಗೆ ಎಚ್ಚರವಾಗಿರಬೇಕು. ಯಾವುದೇ ಕಾರಣಕ್ಕೂ ಇಂಥವರಿಗೆ ಮತ ನೀಡಬಾರದು ಎಂದರು ಕುಮಾರಸ್ವಾಮಿ ಅವರು.

ಕಾಂಗ್ರೆಸ್, ಬಿಜೆಪಿ ರೌಡಿ ಶೀಟರ್ ಗಳಿಗೆ ಎಗ್ಗಿಲ್ಲದೆ ಪಕ್ಷದಲ್ಲಿ ಟಿಕೆಟ್ ನೀಡುತ್ತಿವೆ. ಆಸೆಗೆ ಅಮಾಯಕರ ಜೀವನ ಬಲಿ ಪಡೆದವರನ್ನ ಪಕ್ಷಕ್ಕೆ ಸೇರಿಸಿಕೊಂಡು ಟಿಕೆಟ್ ಕೊಡ್ತಿದ್ದಾರೆ. ಅದೇ ಅವರ ಪಕ್ಷಕ್ಕೆ ಮುಳುಗಲಿದೆ‌. ಪಾಪದ ಹಣ ಮಾಡಲು ಹೊರಟಿದ್ದು, ಅವರಿಗೆ ಮುಳುವಾಗಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Tags: BJPbsbommaiBSYCongress PartyctraviDKSDKShivakumarHD KumaraswamyhdrevannaJDSsiddarmaiahಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸುಳ್ಳಿನ ಉರಿಗೌಡ, ನಂಜೇಗೌಡ ಮಾತು ಹಾಗಿರಲಿ ; ಜೀವಂತ ಬೇಯುತ್ತಿರುವ ಉರಿಗೌಡ, ನಂಜೇಗೌಡರ ಪಾಡೇನು?

Next Post

ಎರಡು ವರ್ಷ ಹಿಂದೆ ನಡೆದ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ತಂಡ : Murder Case

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಎರಡು ವರ್ಷ ಹಿಂದೆ ನಡೆದ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ತಂಡ : Murder Case

ಎರಡು ವರ್ಷ ಹಿಂದೆ ನಡೆದ ಕೊಲೆ ಪ್ರಕರಣ ಭೇದಿಸಿದ ಪೊಲೀಸ್ ತಂಡ : Murder Case

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada