ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ (Home minister Parameshwar) ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ದೆಹಲಿ ಪ್ರಯಾಣ ಮುಗಿಸಿ ಬಂದ ಅವರ ಈ ಹೇಳಿಕೆ ಸಂಚಲನಕ್ಕೆ ಕಾರಣವಾಗಿದೆ.

ಹೌದು ಕಾರ್ಯಕರ್ತರ ಸಮಸ್ಯೆಗಳಿಗೆ ತಾವು ಸ್ಪಂದಿಸದಿರುವುದಕ್ಕೆ ತುಂಬಾ ಬೇಸರವಾಗುತ್ತಿದೆ. ನೀವು ಹೇಳಿದರೆ ಕೂಡಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಬಗ್ಗೆ ತುಮಕೂರಿನಲ್ಲಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರ ಮನಸ್ಸಿನ ಭಾವನೆಗಳಿಗೆ ತಕ್ಕಂತೆ ಸ್ಪಂದಿಸಲು ನನಗೆ ಸಾಧ್ಯವಾಗುತ್ತಿಲ್ಲ,ಜೊತೆಗೆ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೆರೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೂ ರಾಜೀನಾಮೆ ನೀಡಲು ಸಿದ್ಧ ಎಂದು ಪರಮೇಶ್ವರ್ ಹೇಳಿದ್ದಾರೆ.