ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಳನ್ನು ದಾನ ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಸಿಂಗಾಪುರ ಗ್ರಾಮದ ಅನಂತ ಸಾಕಮ್ಮ ದಂಪತಿ ಪುತ್ರ ಸಚಿನ್ (22) ಮೃತ ಯುವಕ ಎಂದು ತಿಳಿದು ಬಂದಿದೆ.
ಲೇಬರ್ ಕಂಟ್ರಾಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಚಿನ ನವೆಂಬರ್ 28ರಂದು ಕೆ.ಆರ್.ಪೇಟೆy ಚಟ್ಟಂಗೆರೆ ಬಳಿ ಬೈಕಿನಲ್ಲಿ ಬರುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿತ್ತು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ JSS ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಸಚಿನ್ ಮೆದುಳು ನಿಷ್ಕ್ರಿಯಗೊಂಡಿರುವ ಬಗ್ಗೆ ಪೋಷಕರಿಗೆ ತಿಳಿಸಿದ್ದರು. ಇದಕ್ಕೆ ಪೋಷಕರು ಪುತ್ರನ ಅಂಗಾಂಗಳನ್ನು ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.