ಕಾರವಾರ: ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಪರೇಶ್ ಮೇಸ್ತಾ ಕೊಲೆ (Paresh Mesta) ಪ್ರಕರಣಕ್ಕೆ ಸಂಬಂಧಿಸಿದಂತೆ 122 ಜನರ ಮೇಲೆ ದಾದಖಲಾಗಿದ್ದ ಮೂರು ಪ್ರಕರಣವನ್ನು ಹಿಂಪಡೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಆದೇಶ ಹೊರಡಿಸಿದ್ದಾರೆ.
2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ. ಇದೊಂದು ಕೊಲೆ ಎಂದು ಬಿಜೆಪಿ(BJP) ಸೇರಿದಂತೆ ಬಲಪಂಥೀಯ ಸಂಘಟನೆಗಳು ಆರೋಪಿಸಿದ್ದವು. ಇದು ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಸದ್ಯ ಈಗ ಶಿರಸಿಯಲ್ಲಿ ನಡೆದಿದ್ದ ಗಲಭೆಯಲ್ಲಿ 122 ಜನರ ಮೇಲಿದ್ದ ಮೂರು ಪ್ರಕರಣವನ್ನು ಹಿಂಪಡೆದು ಈ ಹಿಂದೆ 26 ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಅಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಸೇರಿದಂತೆ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು. ಈಗ 112 ಜನರ ಪ್ರಕರಣ ಹಿಂಪಡೆದು ಆದೇಶ ಹೊರಡಿಸಲಾಗಿದ್ದು, ಸರ್ಕಾರಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.