• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಡಿಯೋ, ವಿದೇಶ, ವಿಶೇಷ
0
ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.
Share on WhatsAppShare on FacebookShare on Telegram

ನವದೆಹಲಿ:ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.

ADVERTISEMENT

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು. ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು. ನಂತರ ಗೃಹಲಕ್ಷ್ಮಿ ಯೋಜನೆಯನ್ನು ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು.

ಮೊದಲ ಮೂರು ತಿಂಗಳಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ.ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ.ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.

DK Shivakumar: ದೆಹಲಿಯಲ್ಲಿ ಕರ್ನಾಟಕದ 5 ಗ್ಯಾರಂಟಿ ಯೋಜನೆ ಬಗ್ಗೆ ಡಿಕೆಶಿ ಹೇಳಿದ್ದೇನು..! #siddaramaiah

ಮಾಸಿಕ 4-5 ಸಾವಿರ ಉಳಿತಾಯ:ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಇಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ” ಎಂದು ತಿಳಿಸಿದರು.

ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳ ಕುಟುಂಬಗಳಲ್ಲಿ ಆಗಿರುವ ಬದಲಾವಣೆ, ನೆರವಿನ ಕುರಿತ ವಿಡಿಯೋಗಳನ್ನು ಪ್ರಸಾರ ಮಾಡಲಾಯಿತು.“ನಾವು ಇಲ್ಲಿ ತೋರಿಸಿರುವ ವಿಡಿಯೋಗಳು ನಾವು ಮಾಡಿರುವುದಲ್ಲ. ಮಾಧ್ಯಮಗಳು ವರದಿ ಮಾಡಿರುವ ವಿಡಿಯೋಗಳನ್ನು ನಿಮ್ಮ ಮುಂದೆ ಇಟ್ಟಿದ್ದೇವೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ರವಾನಿಸಲಾಗುತ್ತಿದೆ” ಎಂದರು.

ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು:“ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು. ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದು ತಿಳಿಸಿದರು.

“ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದರು.

ಹೊಸ ವರ್ಷ ದೆಹಲಿಯಲ್ಲಿ ಬದಲಾವಣೆ ತರಲಿ:“ಎಲ್ಲರಿಗೂ ಹೊಸವರ್ಷದ ಶುಭಾಷಯಗಳು. ಈ ಹೊಸ ವರ್ಷ ದೆಹಲಿಯಲ್ಲಿ ಬದಲಾವಣೆಯನ್ನು ತರಲಿ. ನೀವೆಲ್ಲರೂ ಕಾಂಗ್ರೆಸ್ ಸರ್ಕಾರ ಬರಲು ಸಹಾಯ ಮಾಡುವ ನಿರೀಕ್ಷೆಯಿದೆ.ಕಾಂಗ್ರೆಸ್ ಪಕ್ಷ ಕೊಟ್ಟ ಮಾತನನ್ನು ಉಳಿಸಿಕೊಂಡಿದೆ.ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಮುಂದೆಯೂ ನಾವು ಕೊಟ್ಟ ಮಾತನ್ನು ಉಳಿಸಿಕೊಂಡು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ” ಎಂದು ತಿಳಿಸಿದರು.

Dinesh Gundu Rao: ರಾಜ್ಯದಲ್ಲಿ HMP ವೈರಸ್ ಪತ್ತೆ ಬಗ್ಗೆ ದಿನೇಶ್ ಗುಂಡೂರಾವ್ ರಿಯಾಕ್ಷನ್..! #siddaramaiah #hmpv

ಪ್ರಶ್ನೋತ್ತರ:*ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕತೆ ಹದಗೆಡುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಅಗತ್ಯವಾದ ಅನುದಾನ ಮೀಸಲಿಟ್ಟಿದ್ದೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.70 ಲಕ್ಷ ಕೋಟಿಗೂ ಹೆಚ್ಚಿದೆ. ಅದರಲ್ಲಿ 56 ಸಾವಿರ ಕೋಟಿ ಈ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಫಲಾನುಭವಿಗಳ ಖಾತೆಗೆ ಹಣ ತಲುಪುವುದು 10-15 ದಿನಗಳು ವಿಳಂಬವಾಗಬಹುದು, ಆದರೆ ನಮ್ಮ ಯೋಜನೆ ನಿಲ್ಲುವುದಿಲ್ಲ. ದೇಶದಲ್ಲಿ ಮಹಾರಾಷ್ಟ್ರ ನಂತರ ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಆರ್ಥಿಕತೆ ಹೊಂದಿರುವ ರಾಜ್ಯ. ನಾವು ದೇಶಕ್ಕೆ ಹೆಚ್ಚು ತೆರಿಗೆ ನೀಡುತ್ತಿದ್ದು, ನಮ್ಮ ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದೆ” ಎಂದರು.

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಜನರಿಗೆ ಆರ್ಥಿಕ ಶಕ್ತಿ ತುಂಬುವುದು ಅಭಿವೃದ್ಧಿಯಲ್ಲವೇ? ಪ್ರತಿ ಕುಟುಂಬ, ಜನರು ಆರ್ಥಿಕವಾಗಿ ಸುಭದ್ರವಾಗುವುದು ಅಭಿವೃದ್ಧಿಯಲ್ಲವೇ? ವ್ಯಾಪಾರಿಗಳು, ಜನ ಸಾಮಾನ್ಯರ ಬಳಿ ಹಣ ಹರಿದಾಡುತ್ತಿದ್ದು, ಸಂತೋಷವಾಗಿದ್ದಾರೆ. ಇದು ಅಭಿವೃದ್ಧಿಯಲ್ಲವೇ? ಜನರಿಗೆ ವೈಯಕ್ತಿಕವಾಗಿ ಆರ್ಥಿಕ ಬಲ ತುಂಬುವುದು ನಮ್ಮ ಯೋಜನೆಗಳ ಉದ್ದೇಶ. ಜನರು ಶಕ್ತಿಶಾಲಿಯಾದರೆ ಅವರ ಕುಟುಂಬ ಶಕ್ತಿಶಾಲಿಯಾಗುತ್ತದೆ. ಕುಟುಂಬಗಳು ಶಕ್ತಿಶಾಲಿಯಾದರೆ ನಮ್ಮ ರಾಜ್ಯ ಶಕ್ತಿಶಾಲಿಯಾಗುತ್ತದೆ” ಎಂದು ತಿಳಿಸಿದರು.

ಬಸ್ ದರ ಏರಿಕೆ ಬಗ್ಗೆ ಕೇಳಿದಾಗ, “ಬಸ್ ಟಿಕೆಟ್ ದರ ಏರಿಕೆ ವಿಚಾರವಾಗಿ ಕೆಲವು ಮಾನದಂಡಗಳಿವೆ. ಇಂಧನ ಬೆಲೆ ಏರಿಕೆಯಾದಾಗ ಟಿಕೆಟ್ ದರ ಕೂಡ ಏರಿಕೆಯಾಗುತ್ತದೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲೇ ನಾವು ಇಂಧನೆ ಬೆಲೆ ಏರಿಕೆಯಾದರೆ ಟಿಕೆಟ್ ದರ ಏರಿಸಲು ತೀರ್ಮಾನಿಸಲಾಗಿತ್ತು. ರಾಜ್ಯ ಸಾರಿಗೆ ಸಂಸ್ಥೆಗಳು ತಮ್ಮದೇ ಸಾಮರ್ಥ್ಯಗಳ ಮೇಲೆ ನಡೆಯುತ್ತಿವೆ” ಎಂದು ಉತ್ತರಿಸಿದರು.

Tags: "Happy New Year everyone"State transport agencies.announced Congress's first guarantebus fare hikeCongress PartyDCM D.K.SivakumarFood Security ActGhrilakshmiIt is safeLet New Year bring change in DelhiManmohan Singh's tenureNew DelhiPari Didi YojanaRs 2500 per month
Previous Post

ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು:ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ.

Next Post

Renukaswamy Murder Case: 7 ಜನರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ..!!

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post

Renukaswamy Murder Case: 7 ಜನರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada