ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.
ಹೌದು, ವಿಧಾನ ಪರಿಷತ್ ಚುನಾವಣೆ ಸಂಬಂಧಿ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್ ಟಿಕೆಟ್ ದೊರೆತಿದೆ. ಮಹಿಳಾ ಕೋಟದಡಿಯಲ್ಲಿ ಕೊಪ್ಪಳ ಮೂಲದ ಲಂಬಾಣಿ ಸಮುದಾಯದ ಹೇಮಲತಾ ನಾಯಕ್, ಹಿಂದುಳಿದ ವರ್ಗ ಕೋಟಾದಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿಯಾಗಿದ್ದ ಕೇಶವ ಪ್ರಸಾದ್, ದಲಿತರ ಕೋಟದಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡಲಾಗಿದೆ.

ಇತ್ತೀಚೆಗೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಹೊರಟ್ಟಿ ಅವರಿಗೆ ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಟಿಕೆಟ್ ನೀಡಿದೆ.