ಮೇ.18ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 11 ಕ್ಕೆ ರಾಜೀನಾಮೆ ಕೊಡಬೇಕಿತ್ತು ಆದರೆ ಚುನಾವಣಾ ನೋಟಿಫಿಕೇಶ್ ಬರದಿದ್ದ ಕಾರಣ ನೀಡಿರಲಿಲ್ಲ. ಈಗ ನೋಟಿಫಿಕೇಶನ್ ಕೂಡ ಬಂದಿದೆ ಮೇ 18 ಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಟಿಕೆಟ್ ವಿಚಾರವಾಗಿ ಮೇ 18 ರ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.