ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಸಾಕಿದ ನಾಯಿಗಾಗಿಯೇ ಐಷರಾಮಿ ಅಪಾರ್ಟ್ ಮೆಂಟ್ ಖರೀದಿಸಿದ್ದು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಪಾರ್ಥ ಮುಖರ್ಜಿ ಅವರ ಆಪ್ತೆಯ ನಿವಾಸದಲ್ಲಿ ೨೦ ಕೋಟಿ ರೂ. ನಗದು ಸೇರಿದಂತೆ ಅಪಾರ ಪ್ರಮಾಣದ ಸ್ವತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅವರನ್ನು ಬಂಧಿಸಿತ್ತು.

ಶ್ವಾನಪ್ರಿಯರಾಗಿರುವ ಪಾರ್ಥ ಚಟರ್ಜಿ ತಾವು ಸಾಕು ನಾಯಿಗಳಿಗೆ ತಂಗಲು ಅಪಾರ್ಟ್ ಮೆಂಟ್ ಖರೀದಿಸಿದ್ದು, ಇದು ಸಂಪೂರ್ಣ ಹವಾನಿಯಂತ್ರಿತವಾಗಿದೆ.
ಸಚಿವ ಪಾರ್ಥ ಚಟರ್ಜಿ ಆಸ್ಪತ್ರೆಯಲ್ಲಿ ಡಾನ್ ತರಹ ಆಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ದಾಳಿ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪಾರ್ಥ ಮುಖರ್ಜಿ 3 ಬಾರಿ ಕರೆ ಮಾಡಿದ್ದಾರೆ.












