ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಇಂದು(ಶುಕ್ರವಾರ) ಹಾಸನ(Hassan) ಹಾಗೂ ಮೈಸೂರು(Mysore) ಜಿಲ್ಲಾ(District) ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹಾಸನದ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು ನಂತರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು(Collage) ಆವರಣದಲ್ಲಿ ಹಾಸನ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 1344 ಕೋಟಿ ರೂ ವೆಚ್ಚದ ಹತ್ತಾರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದರ ಜೊತೆ 2022-23 ನೇ ಸಾಲಿನ 15 ನೇ ಹಣಕಾಸು ಯೋಜನೆಯಡಿ ಹಾಸನ ನಗರಸಭೆ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಿರುವ ಸಿದ್ದರಾಮಯ್ಯ ಅವರು, ನಂತರ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸುವರು.

ಕಾರ್ಯಕ್ರಮದಲ್ಲಿ ಭಾಗಗಮಿಸಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರುಗಳು ಭಾಗವಹಿಸಲಿದ್ದಾರೆ. ಸಿಎಂ ಹಾಗೂ ಸಚಿವರ ಆಗಮನ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲೆಯ ಎಲ್ಲಾ ಕಡೆಗಳಿಂದ ಜನರನ್ನು ಕರೆತರಲು ಸುಮಾರು 700 ಕ್ಕೂ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದೆ.

ಹಾಸನದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ಬಳಿಕ ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ತೆರಳಲಿದ್ದು, ಮೈಸೂರು ನಗರದಲ್ಲಿ ನಡೆಯುವ ಹೋರಾಟಗಾರ ಪ.ಮಲ್ಲೇಶ್ ಸ್ಮರಣಾರ್ಥ ಭಾರತ ಜನತಂತ್ರದ ಸಮಕಾಲಿನ ತಲ್ಲಣಗಳು ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲಿದ್ದು, ಸಂಜೆ 5ಕ್ಕೆ ದಿವಂಗತ ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ನಿರ್ಮಿಸಿರುವ ಖಾಸಗಿ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ. ಸಂಜೆ 6ಕ್ಕೆ ಯರಗನಹಳ್ಳಿ ಯಲ್ಲಿ ನಿವೃತ್ತ ಶಿಕ್ಷಕರ ಸದನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮೈಸೂರಿನ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
#Siddaramaiah #Hassan #Mysore #TourProgramm #Congress