ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಹೀಗೆ ಪ್ರತಿಕ್ರಿಯಿಸಿದರು. ಕೋಲಾರ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿ ಪರಿಣಮಿಸಿದ್ದು ಆದಷ್ಟು ಬೇಗ ಗೊಂದಲ ಬಗೆಹರಿಯಲಿದೆ ಎಂದು ಹೇಳಿದ್ದಾರೆ.
ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ,ಹೀಗೆ ಯಾರೂ ಕೂಡ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇರೋದು ನಿಜ ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಏನೇ ಸಮಜಾಯಿಶಿ ಕೊಟ್ಟರು ಬಂಡಾಯ ಬಹಿರಂಗವಾಗಿ ಸ್ಫೋಟಗೊಂಡಿದ್ದು , ಕೇವಲ ನಾಯಕರು ಡ್ಯಾಮೇಜ್ ಕಂಟ್ರೋಲ್ ಗೆ ಮಾತ್ರ ಮುಂದಾಗಿದ್ದಾರೆ. ಸ್ವತಃ ಹೈಕಮಾಂಡ್ ಕೋಲಾರ ವಿಷ್ಯಕ್ಕೆ ಎಂಟರ್ ಆಗಿದ್ದು ಅಂತಿಮವಾಗಿ ಏನಾಗಲಿದ್ಯೋ ಕಾದು ನೋಡಬೇಕಿದೆ.