• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

“ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar)ತಿಳಿಸಿದರು.

ADVERTISEMENT

ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್(. Shivakumar) ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ ಚರ್ಚೆ ಇದೆ ಎಂದು ಕೇಳಿದಾಗ, “ಯಾವ ಚರ್ಚೆ? ನಿಮ್ಮ ಬಳಿ ಮಾತಾಡಿರಬಹುದು. ನನ್ನ ಬಳಿ ಯಾರೂ ಮಾತನಾಡಿಲ್ಲ. ನಮಗೆ ಕೆಲಸ ಮಾಡುವವರು ಬೇಕು. ಅವರಿಗೆ ಜವಾಬ್ದಾರಿ ಕೊಟ್ಟರೆ ತಕ್ಕ ಫಲಿತಾಂಶ ಬರಬೇಕು. ನಮ್ಮ ಸುತ್ತ ಗಿರಿಗಿಟ್ಲೆಯಂತೆ ಸುತ್ತುತ್ತಿದ್ದರೆ ಆಗುವುದಿಲ್ಲ. ತಾಲೂಕಿನಲ್ಲಿ ಕೂತು, ಅಲ್ಲಿರುವ ಸಮಸ್ಯೆ ಬಗೆಹರಿಸಬೇಕು. ಫಲಿತಾಂಶ ಬರುವ ನಾಯಕತ್ವಕ್ಕೆ ಮಾತ್ರ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.

ಕೆಲಸ ಮಾಡುವವರಿಗೆ ಅವಕಾಶ ನೀಡುವಂತೆ ಎಐಸಿಸಿ ಸೂಚನೆ:

ಪದಾಧಿಕಾರಿಗಳ ಪಟ್ಟಿಯನ್ನು ಹೈಕಮಾಂಡ್ ನಾಯಕರಿಗೆ ನೀಡುತ್ತೀರಾ ಎಂದು ಕೇಳಿದಾಗ, “ಸಧ್ಯಕ್ಕೆ ಇಲ್ಲ. ಪಟ್ಟಿ ಸಿದ್ಧವಾಗಿದ್ದು, ಯಾರಿಗೆ ಆಸಕ್ತಿ ಇಲ್ಲ ಅವರ ಜಾಗಕ್ಕೆ ಬೇರೆಯವರನ್ನು ನೇಮಿಸಲಾಗುವುದು. ಪಕ್ಷ ಸಂಘಟನೆ ವಿಚಾರದಲ್ಲಿ ನಮಗೆ ದಿನವಿಡೀ ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರು ಬೇಕು. ಬೇರೆಯವರ ಒತ್ತಡದ ಮೇರೆಗೆ ನೇಮಕ ಮಾಡಿಕೊಂಡು ಸಮಯ ವ್ಯರ್ಥ ಮಾಡುವುದರಲ್ಲಿ ಪ್ರಯೋಜನವಿಲ್ಲ. ಕೆಲಸ ಮಾಡುವವರಿಗೆ ಅವಕಾಶ ನೀಡಿ ಎಂದು ಎಐಸಿಸಿ ಆದೇಶ ನೀಡಿದೆ. ಈ ವಿಚಾರವಾಗಿ ನಾವು ವರದಿ ತರಿಸಿಕೊಂಡಿದ್ದು, ಸರಿಯಾಗಿ ಕೆಲಸ ಮಾಡುವವರಿಗೆ ಜವಾಬ್ದಾರಿ ನೀಡಲಾಗುವುದು. ಮೀಸಲಾತಿ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿ ಅವರನ್ನು ತಯಾರಿ ಮಾಡಲಾಗುತ್ತಿದೆ. ಈ ವಿಚಾರವಾಗಿ ಮಂತ್ರಿಗಳ ಅಭಿಪ್ರಾಯ ಪಡೆಯುತ್ತಿದ್ದು, ಈ ವಾರವೇ ಈ ಪಟ್ಟಿ ಅಂತಿಮಗೊಳಿಸಲಾಗುವುದು” ಎಂದು ಹೇಳಿದರು.

ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ರಾಜಸ್ಥಾನದಲ್ಲಿ ನಡೆದ ಜಲಶಕ್ತಿ ಸಮ್ಮೇಳನದಲ್ಲಿ ನಾನು ರಾಜ್ಯದ ನೀರಾವರಿ ಯೋಜನೆಗಳ ಪ್ರಸ್ತಾಪ ಮಾಡಿದ್ದೆ. ನೀರಾವರಿ ವಿಚಾರದಲ್ಲಿ ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ತಿಳಿಸಿದ್ದೆ. ಕೆಲವು ಯೋಜನೆಗೆ ಘೋಷಣೆ ಮಾಡಿದ ಹಣ ಬಿಡುಗಡೆ ಮಾಡಿಲ್ಲ, ಮತ್ತೆ ಕೆಲವು ಯೋಜನೆಗಳಿಗೆ ಅನುಮತಿ ನೀಡಿಲ್ಲ. ಈ ವಿಚಾರಗಳನ್ನು ಪ್ರಸ್ತಾಪಿಸಿದಾಗ ಸಚಿವರು ರಾಜ್ಯದ ನೀರಾವರಿ ವಿಚಾರವಾಗಿ ಪ್ರತ್ಯೇಕ ಸಭೆ ಮಾಡುವುದಾಗಿ ಭರವಸೆ ನೀಡಿ ಸಮಯ ನಿಗದಿ ಮಾಡಿದ್ದರು.

25ರಂದು (ಇಂದು) ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರು ಸಭೆ ನಿಗದಿ ಮಾಡಿದ್ದರು. ಒಂದು ದಿನ ಮುಂಚಿತವಾಗಿ ನಮ್ಮ ಇಲಾಖೆ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿ ಪೂರ್ವಭಾವಿ ಸಭೆ ಮಾಡಲಾಗಿದೆ. ಈ ಸಭೆಯಲ್ಲಿ ನಮ್ಮ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ ನೀಡುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಮರಾಠಿಗರ ದಾಳಿ ವಿಚಾರವಾಗಿ ಕೇಳಿದಾಗ, “ಗೃಹ ಸಚಿವರು, ಸಾರಿಗೆ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಈ ವಿಚಾರವನ್ನು ನಿಭಾಯಿಸುತ್ತಿದ್ದಾರೆ. ಅವರು ಎಲ್ಲವನ್ನು ನೋಡಿಕೊಳ್ಳುತ್ತಾರೆ” ಎಂದು ತಿಳಿಸಿದರು.

Tags: CM Siddaramaiahcm siddaramaiah dk shivakumarDCM DK ShivakumarDK Shivakumardk shivakumar on siddaramaiah
Previous Post

ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವರಿಗೆ ಮನವಿ

Next Post

ಸಿಎಂ ಆಪ್ತರ ವಿರುದ್ಧ ಡಿಕೆ ದೂರು..?! ಡಿಸಿಎಂ ದೆಹಲಿ ಪ್ರವಾಸದ ಸೀಕ್ರೆಟ್ ಏನು..?! 

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ನಾನು ಯಾರಿಂದಲೂ ಶಿಸ್ತಿನ ಪಾಠ ಕಲಿಯಬೇಕಿಲ್ಲ ..! ಡಿಕೆಶಿಗೆ ರಾಜಣ್ಣ ಡೈರೆಕ್ಟ್ ಕೌಂಟರ್ ! 

ಸಿಎಂ ಆಪ್ತರ ವಿರುದ್ಧ ಡಿಕೆ ದೂರು..?! ಡಿಸಿಎಂ ದೆಹಲಿ ಪ್ರವಾಸದ ಸೀಕ್ರೆಟ್ ಏನು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada