
ಕನ್ನಡದ ನಟಿ ಪವಿತ್ರಾ ಜಯರಾಂ ವಿಧಿವಶರಾಗಿದ್ದಾರೆ. ಕಿರುತೆರೆ ಪರದೆಯಲ್ಲಿ ಮಿಂಚಿ ಅಪಾರ ಯಶಸ್ಸು ಗಳಿಸಿದ್ದ ನಟಿ ಪವಿತ್ರಾ ಜಯರಾಂ ತಮ್ಮ ದೊಡ್ಡ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ.ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ.

ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು

.ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಪವಿತ್ರಾ ನಿಧನಕ್ಕೆ ಕುಟುಂಬಸ್ಥರು ಶಾಕ್ ಆಗಿದ್ದು, ಇಡೀ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.