• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
August 18, 2026
in Top Story
0
ಪವಿತ್ರಾ ಗೌಡಗೆ ಜೈಲಿನಲ್ಲಿ ರಾಜಾತಿಥ್ಯ? ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದೇನು?
Share on WhatsAppShare on FacebookShare on Telegram

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಜೈಲಿಗೆ ಭೇಟಿ ನೀಡಿ ಮಹಿಳಾ ಬ್ಯಾರಕ್‌ಗಳು, ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ಮಕ್ಕಳ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಮಹಿಳಾ ಕೈದಿಗಳ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.ಜೈಲಿನಲ್ಲಿ 200ಕ್ಕೂ ಅಧಿಕ ಮಹಿಳಾ ಕೈದಿಗಳಿದ್ದು, ಭೇಟಿ ನೀಡಿದ ದಿನ ಆರು ಮಂದಿ ಮಹಿಳಾ ಕೈದಿಗಳು ಬಿಡುಗಡೆಯಾಗಿದ್ದಾರೆ ಎಂದು ನಾಗಲಕ್ಷ್ಮೀ ಚೌಧರಿ ತಿಳಿಸಿದರು. ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಹಾಗೂ ಊಟದ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಜೈಲೂಟದ ಗುಣಮಟ್ಟ ತಿಳಿಯಲು ತಾವೇ ಊಟ ಮಾಡಿ ಪರಿಶೀಲಿಸಿರುವುದಾಗಿ ಹೇಳಿದರು.

ADVERTISEMENT
D.K. Shivakumar : ಯಡಿಯೂರಪ್ಪ ಹೊಸ ಪಾರ್ಟಿ ಕಟ್ಟಿ, ಸಿಎಂ ಆಗೇ ಬಿಟ್ರು..

ಮಹಿಳಾ ಕೈದಿಗಳಿಗೆ ಕಾನೂನು ನೆರವು ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ವ್ಯವಸ್ಥೆ ಸೇರಿದಂತೆ ಹಲವು ವಿಚಾರಗಳ ಕುರಿತು ಪರಿಶೀಲನೆ ನಡೆಸಲಾಗಿದೆ. ಕೆಲವರಿಗೆ ಜಾಮೀನು ಮಂಜೂರಾಗಿದ್ದರೂ ಶ್ಯೂರಿಟಿ ನೀಡಲು ಸಾಧ್ಯವಾಗದೆ ಜೈಲಿನಲ್ಲೇ ಉಳಿಯುವ ಪರಿಸ್ಥಿತಿ ಇದೆ. ಹಣದ ಕೊರತೆಯಿಂದಲೂ ಕೆಲವರು ಬಿಡುಗಡೆಯಾಗಲು ಸಾಧ್ಯವಾಗುತ್ತಿಲ್ಲ. ಈ ವಿಚಾರವನ್ನು ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.ಜೈಲಿನಲ್ಲಿ ಸುಮಾರು 8ರಿಂದ 10 ಮಂದಿ ಪುಟಾಣಿ ಮಕ್ಕಳಿದ್ದಾರೆ. ಮಕ್ಕಳಿಗಾಗಿ ಜೈಲಿನೊಳಗೆ ಶಾಲೆ ಇದ್ದು, ಮೂವರು ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳು ಕನ್ನಡ ಹಾಗೂ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ಮತ್ತು ನೈಜೀರಿಯಾದ ಮಕ್ಕಳು ಕೂಡ ಕನ್ನಡ ಹಾಡುಗಳನ್ನು ಹಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ನಾಗಲಕ್ಷ್ಮೀ ಚೌಧರಿ ಹೇಳಿದರು.

D.K. Shivakumar : ಯಡಿಯೂರಪ್ಪ ಹೊಸ ಪಾರ್ಟಿ ಕಟ್ಟಿ, ಸಿಎಂ ಆಗೇ ಬಿಟ್ರು..

ಆರು ವರ್ಷದೊಳಗಿನ ಮಕ್ಕಳಿಗೆ ತಾಯಿಯೊಂದಿಗೆ ಜೈಲಿನಲ್ಲಿ ಇರಲು ಅವಕಾಶವಿದೆ. ಮಹಿಳಾ ಕೈದಿಗಳು ಜೈಲಿನೊಳಗೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದು, ಮಹಿಳೆಯರು ಹಾಗೂ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಜೈಲು ಆಡಳಿತದಿಂದ ಒದಗಿಸಲಾಗುತ್ತಿದೆ ಎಂದರು.ಮಹಿಳಾ ಕೈದಿಗಳು ಸೊಳ್ಳೆಗಳ ಸಮಸ್ಯೆ ಕುರಿತು ದೂರು ನೀಡಿದ್ದಾರೆ. ರಾತ್ರಿ ವೇಳೆ ಸೊಳ್ಳೆಗಳ ಕಾಟದಿಂದ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ನಾಗಲಕ್ಷ್ಮೀ ಚೌಧರಿ ಹೇಳಿದರು.

Session Congress vs BJP : ಖರ್ಗೆ ಭಾಷಣದ ಜಾಗ ಶುದ್ಧೀಕರಣ: ಬಿಜೆಪಿ ನಾಯಕರ ವಿರುದ್ಧ ʼಕೈʼ ಶಾಸಕರು ಆಕ್ರೋಶ..!

ಜೈಲಿನಲ್ಲಿರುವ ಕೆಲ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಪವಿತ್ರಾಗೌಡ ಸೇರಿದಂತೆ ಜೈಲಿನಲ್ಲಿರುವ ಎಲ್ಲ ಮಹಿಳಾ ಕೈದಿಗಳೊಂದಿಗೆ ಮಾತನಾಡಿರುವುದಾಗಿ ತಿಳಿಸಿದರು.“ಪವಿತ್ರಾಗೌಡ ಮಾತ್ರವಲ್ಲ, ಜೈಲಿನಲ್ಲಿರುವ ಎಲ್ಲ ಮಹಿಳಾ ಕೈದಿಗಳೂ ನಮಗೆ ಒಂದೇ. ಯಾರನ್ನೂ ಪ್ರತ್ಯೇಕವಾಗಿ ನೋಡಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.ಈಗಾಗಲೇ ತಪ್ಪು ಮಾಡಿ ಜೈಲಿಗೆ ಬಂದಿರುವವರ ಬಗ್ಗೆ ಮತ್ತೆ ಮತ್ತೆ ಮಾತನಾಡುವುದರಿಂದ ಅವರ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಬಹುದು. ಪವಿತ್ರಾಗೌಡ ಅವರು ಮಾನಸಿಕವಾಗಿ ಕುಗ್ಗಿರುವ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಎಲ್ಲ ಕೈದಿಗಳನ್ನೂ ಸಮಾನವಾಗಿ ಪರಿಗಣಿಸಲಾಗುತ್ತಿದೆ ಎಂದರು.ಜೈಲು ವ್ಯವಸ್ಥೆಯಲ್ಲಿ ಸಣ್ಣಪುಟ್ಟ ಲೋಪಗಳಿರಬಹುದು. ಅವುಗಳನ್ನು ಗುರುತಿಸಿ ಸರಿಪಡಿಸುವ ಉದ್ದೇಶದಿಂದ ನಿರಂತರವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು.

Tags: #BengaluruCentralJail#JailNews#KarnatakaNews #BengaluruNews#KarnatakaStateWomenCommission#LegalAid #PrisonChildren#PrisonFacilities#PrisonInspection#PrisonReforms#WomenCommission#WomenPrisoners#WomenPrisonersRights#WomenRightsNagalakshmiChowdharyPavithragowda
Previous Post

ನಿರೂಪಣಾ ಪಯಣಕ್ಕೆ ಅನುಪಮಾ ಗೌಡ ವಿದಾಯ;ಕಾರಣವೇನು?

Next Post

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಾರಣವೇನು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada