
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) A1 ಆರೋಪಿಯಾಗಿರುವ ಪವಿತ್ರ ಗೌಡ (Pavitra gowda) ಕಳೆದ ತಿಂಗಳು ಜಾಮೀನಿನ ಮೇಲೆ ಹೊರಬಂದು ಈಗ ಕೊಂಚೆ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಈ ಮಧ್ಯೆ ಪ್ರಯಾಗರಾಜ್ ನಲ್ಲಿ (Prayagaraj) ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಪವಿತ್ರ ಗೌಡ ತೆರಳಿದ್ದು ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಪೇಜ್ ನಲ್ಲಿ (Instagram) ಪೋಸ್ಟ್ ಮಾಡಿದ್ದಾರೆ.

ಕೊಲೆ ಪ್ರಲರಣದಲ್ಲಿ ನೂರಕ್ಕೂ ಹೆಚ್ಚು ದಿನ ಜೈಲುವಾಸ ಅನುಭವಿಸಿ ಬಂದಿರುವ A1 ಪವಿತ್ರ ಗೌಡ, ಇದೀಗ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಈ ಫೋಟೋ ಜೊತೆಗಿನ ಅಡಿಬಹಾರ ಅವರ ಫಾಲೋವರ್ಸ್ ಗಮನ ಸೆಳೆಯುತ್ತಿದೆ.

ಧರ್ಮ ಅಧರ್ಮಗಳ ಸಂಘರ್ಷದಲ್ಲಿ ಗೆದ್ದದ್ದು ಧರ್ಮವೇ.ಮೊದಮೊದಲು ಅಧರ್ಮಕ್ಕೆ ಜಯ ಸಿಕ್ಕಿರಬಹುದು, ಆದರೆ ಕೊನೆಗೆ ಗೆಲುವಾಗುವುದು ಧರ್ಮಕ್ಕೆ.ಎಲ್ಲಾ ಗೌರವಾನ್ವಿತ ಸುದ್ದಿ ವಾಹಿನಿಗಳಿಗೂ ಹಾಗೂ ಸಾಮಾಜಿಕ ಜಾಲತಾಣಗಳಿಗೂ ನನ್ನ ವಂದನೆಗಳು.ಕೇವಲ ಕೆಲವು ಮಾಧ್ಯಮದವರ ಅಮಾನವೀಯ ಮಾತುಗಳು ಹಾಗೂ ಕೆಲ ವಿಕೃತ ಮನಸ್ಕರ comments ಬೇಸರ ತಂದಿದೆ. ಕಾಲಾಯ ತಸ್ಮೈ ನಮಃ .. ಎಂದು ಪವಿತ್ರ ಗೌಡ ಪೋಸ್ಟ್ ಮಾಡಿದ್ದಾರೆ.
