ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಟ ಸುದೀಪ್ ಅವರ ತಾಯಿ ನಿಧನರಾಗಿದ್ದು, ಸುದೀಪ್ದುಃಖದ ಮಡುವಿನಲ್ಲಿದ್ದಾರೆ. ಈ ಮಧ್ಯೆ ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಹಲವಾರು ಗಣ್ಯರು ಸರೋಜಮ್ಮನವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಕೂಡ ಸಂತಾಪ ಸೂಚಿಸಿದ್ದಾರೆ.
ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಖ್ಯಾತ ನಟ ಶ್ರೀ ಕಿಚ್ಚ ಸುದೀಪ್ ಅವರ ತಾಯಿ ಶ್ರೀಮತಿ ಸರೋಜಾ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ದುಃಖವಾಗಿದೆ. ಶ್ರೀಮತಿ ಸರೋಜಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸುದೀಪ್ ತಮ್ಮ ನಟನೆಯ ಮೇಲೆ ತಾಯಿಯ ಪ್ರಭಾವ ಮತ್ತು ಪ್ರೋತ್ಸಾಹವಿದೆ ಎಂದು ಶ್ರೀ ಸುದೀಪ್ ಅವರು ಹೇಳಿದ್ದರು. ತಾಯಿಯ ನಷ್ಪದಿಂದ ಬೇಗ ಚೇತರಿಸಿಕೊಳ್ಳಬೇಕು. ಶ್ರೀ ಸುದೀಪ್ ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು ಎಂದು ತಿಳಿಸಿದ್ದಾರೆ.