ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕುರಿತು ಉಭಯ ರಾಜ್ಯದ ನಾಯಕರು ಹೇಳಿಕೆ ನೀಡಿರುವ ಬೆನ್ನಲ್ಲೇ ಬೆಳಗಾವಿ ಗಡಿ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ(NCP) ಶರದ್ ಪವಾರ್ ಬೆಳಗಾವಿ, ನಿಪ್ಪಣಿ ಸೇರಿದಂತೆ ಕೆಲ ಊರುಗಳನ್ನು ಬಿಟ್ಟುಕೊಡಲುಇ ಕರ್ನಾಟಕ ಸರ್ಕಾರ ಒಪ್ಪಿದ್ದರೆ ಅದಕ್ಕೆ ಪ್ರತಿಯಾಗಿ ನಾವು ಕೆಲ ಪ್ರದೇಶಗಳನ್ನ ಬಿಟ್ಟುಕೊಡುವ ಬಗ್ಗೆ ಯೋಚಿಸಬಹುದು ಎಂದು ಹೇಳುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಕರ್ನಾಟಕ ಮತ್ತು ಬೆಳಗಾವಿ ಗಡಿ ವಿವಾದದಿಂ ಬಿಜೆಪಿ ಪಲಾಯನ ಮಾಡಲು ಸಾಧ್ಯವಿಲ್ಲ. ವಿವಾದ ನ್ಯಾಯಾಲಯದಲ್ಲಿದ್ದು ಮಹಾರಾಷ್ಟ್ರದ ಒಂದು ಹಳ್ಳಿಯೂ ಸಹ ಕರ್ನಾಟಕಕ್ಕೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.
