ಆರಂಭಿಕ ಶಿಖರ್ ಧವನ್ ಸಿಡಿಸಿದ 88 ರನ್ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ 188 ರನ್ ಗುರಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನೀಡಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು.
ಧವನ್ ಮತ್ತು ಭಾನುಕಾ ರಾಜಪಕ್ಸೆ 2ನೇ ವಿಕೆಟ್ ಗೆ 110 ರನ್ ಜೊತೆಯಾಟ ನಿಭಾಯಿಸಿದರು. ಧವನ್ 59 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 88 ರನ್ ಬಾರಿಸಿ ಔಟಾಗದೇ ಉಳಿದರು. ರಾಜಪಕ್ಸೆ 32 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 42 ರನ್ ಗಳಿಸಿ ತಂಡ ಬೃಹತ್ ಮೊತ್ತ ಕಲೆ ಹಾಕಲು ನೆರವಾದರು.