• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನಾಂಬ ತಾಯಿ ಹಾಗೂ ಜನರ ಆಶೀರ್ವಾದದಿಂದ ಜಿಲ್ಲೆ, ರಾಜ್ಯದಲ್ಲಿ ಶಾಂತಿ, ನೆಮ್ಮದಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ರಾಜಕೀಯ
0
ಹಾಸನಾಂಬ ತಾಯಿ ಹಾಗೂ ಜನರ ಆಶೀರ್ವಾದದಿಂದ ಜಿಲ್ಲೆ, ರಾಜ್ಯದಲ್ಲಿ ಶಾಂತಿ, ನೆಮ್ಮದಿ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

‘ನಾನುಂಟು ತಾಯಿಯುಂಟು, ನಾನುಂಟು ಭಕ್ತಿಯುಂಟು’

ADVERTISEMENT

ಹಾಸನ, ಅ.14:

“ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಶಾಂತಿ ಹಾಗೂ ನೆಮ್ಮದಿಯಿಂದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಇದಕ್ಕೆ ಜನರ ಹಾಗೂ ತಾಯಿ ಹಾಸನಾಂಬೆಯ ಆಶೀರ್ವಾದ ಕಾರಣ‌.‌ ತಾಯಿಯ ಆಶೀರ್ವಾದದಿಂದ ಎಲ್ಲರ ಆಶಯಗಳು ಈಡೇರಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಮಂಗಳವಾರ ಸಂಜೆ ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನ ಪಡೆದ ನಂತರ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

Dinesh Amin Mattu Podcast:  ಎಲೆಕ್ಟೋರಲ್ ಬಾಂಡ್ ಹಗರಣದ ಬಗ್ಗೆ ಮಾಧ್ಯಮಗಳು ಯಾಕೆ ತುಟಿ ಬಿಚ್ಚುತ್ತಿಲ್ಲ..!

“ದುಃಖವನ್ನು ದೂರ ಮಾಡುವವಳು ದುರ್ಗಾ ದೇವಿ. ಶಕ್ತಿ ಸ್ವರೂಪಿಣಿ, ತಾಯಿ ಹಾಸನಾಂಬೆಯ ದರ್ಶನವನ್ನ ಪ್ರತಿ ವರ್ಷ ತಪ್ಪದೇ ಮಾಡಿಕೊಂಡು ಬರುತ್ತಿದ್ದೇವೆ. ಜನರು ಸಹ ತಾಯಿಯ ಆಶೀರ್ವಾದ ಪಡೆದು ನೆಮ್ಮದಿ, ಶಾಂತಿ, ಬದುಕನ್ನು ಪಡೆಯಬೇಕು ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ. ಜನರಲ್ಲಿ ದೊಡ್ಡ ಸಂಭ್ರಮ ಮನೆ ಮಾಡಿದೆ” ಎಂದರು.

“ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಜನರು ಎಷ್ಟೇ ದೂರದಿಂದ ಬಂದರೂ ಸಹ ಒಂದು ಕ್ಷಣ ದೇವರ ಸಾನಿಧ್ಯದಲ್ಲಿ ಪ್ರಾರ್ಥನೆ ಮಾಡಿದರೆ ಏನೋ ನೆಮ್ಮದಿ ದೊರೆಯುತ್ತದೆ. ಹಾಸನ‌ ಜಿಲ್ಲಾ ಉಸ್ತುವಾರಿ ಸಚಿವರಾದ‌ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ಜಿಲ್ಲಾಡಳಿತ ಅತ್ಯುತ್ತಮವಾಗಿ ವ್ಯವಸ್ಥೆ ಮಾಡಿ ಪ್ರತಿಯೊಬ್ಬರಿಗೂ ದರ್ಶನ ಭಾಗ್ಯ ಕಲ್ಪಿಸಿಕೊಟ್ಟಿದ್ದಾರೆ. ಬಹಳ ಶಿಸ್ತಿನಿಂದ ಕೆಲಸ ಮಾಡಿದ್ದಾರೆ” ಎಂದು ಶ್ಲಾಘಿಸಿದರು.

“ಸಾರ್ವಜನಿಕರು ‌ಸಹ ಸಾಕಷ್ಟು ಸಹಕಾರ ನೀಡಿದ್ದಾರೆ. ತಮ್ಮ ಅಂಗಡಿಗಳ ಮುಂದೆ ದೀಪಾಲಂಕಾರ, ವಿವಿಧ ಬಗೆಯ ಅಲಂಕಾರ ಮಾಡಿದ್ದಾರೆ. ನಾನು ದೇವಿಯ ಭಕ್ತನಾಗಿ ಪ್ರತಿಯೊಬ್ಬರಿಗೂ ವಂದಿಸುತ್ತೇನೆ” ಎಂದರು.

ವಿಶೇಷವಾಗಿ ಏನಾದರೂ ಪ್ರಾರ್ಥನೆ ಮಾಡಿದ್ದೀರಾ ಎಂದು ಕೇಳಿದಾಗ, “ನಿಮಗೆ ಹಾಗೂ ನಮಗೆ ತಾಯಿ ಒಳ್ಳೆಯದನ್ನು ಮಾಡಲಿ. ರಾಜ್ಯಕ್ಕೆ ನೆಮ್ಮದಿ, ಶಾಂತಿ ನೀಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ” ಎಂದರು.

ಹೆಚ್ಚಿನ ಅಧಿಕಾರಕ್ಕೆ ಏನಾದರೂ ಪ್ರಾರ್ಥನೆ ಮಾಡಿದ್ದೀರಾ ಎಂದಾಗ, “ನಾನುಂಟು ತಾಯಿಯುಂಟು. ನಾನುಂಟು ಭಕ್ತಿಯುಂಟು, ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ” ಎಂದು ಹೇಳಿದರು.

Tags: DCM DK Shivakumardcm dk shivakumar bookDK Shivakumardk shivakumar cm newsdk shivakumar controversydk shivakumar familydk shivakumar in jp parkdk shivakumar interviewdk shivakumar latestdk shivakumar latest newsdk shivakumar newsdk shivakumar on rssdk shivakumar rss anthemdk shivakumar rss songdk shivakumar speechdk shivakumar statementdk shivakumar today newsdk shivakumar todays newsdk shivakumar wifedk shivakumar wife templeusha dk shivakumar
Previous Post

ಮಾಹಿತಿ ಹಕ್ಕು ಕಾಯ್ದೆ 20 ವರ್ಷಗಳ ಪಯಣ

Next Post

ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡ್ತಾರೆ, ಅವರು ಪಿಎಂ ಆಗೊ‌ ಸಾದ್ಯತೆ ಇದೆ.

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡ್ತಾರೆ, ಅವರು ಪಿಎಂ ಆಗೊ‌ ಸಾದ್ಯತೆ ಇದೆ.

ನಿತಿನ್ ಗಡ್ಕರಿ ಚೆನ್ನಾಗಿ ಕೆಲಸ ಮಾಡ್ತಾರೆ, ಅವರು ಪಿಎಂ ಆಗೊ‌ ಸಾದ್ಯತೆ ಇದೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada