ರಾಷ್ಟ್ರ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆ: ಶರದ್ ಪವಾರ್ ಭೇಟಿಯಾಗಲು ಹೊರಟ ಪ್ರಶಾಂತ್ ಕಿಶೋರ್.!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರ ತಾನು ಪೊಲಿಟಿಕಲ್ ಸ್ಟಾಟರ್ಜಿಸ್ಟ್ (ರಾಜಕೀಯ ಸಲಹೆಗಾರ) ಆಗಿ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿರುವ. ಈ ಬೆಳವಣಿಗೆಯಾದ ಬೆನ್ನಲ್ಲೇ ಈಗ ಪ್ರಶಾಂತ್ ಕಿಶೋರ್ ಅವರು ಶುಕ್ರವಾರ ಮುಂಬೈನಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ, ಬೆಳಿಗ್ಗೆ 11 ಗಂಟೆ ಸುಮಾರಿಗೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ.

ಮಾಹಿತಿಯ ಪ್ರಕಾರ, 2024 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಎದುರು ನಿಲ್ಲುವ ವಿರೋಧ ಪಕ್ಷದ ಮುಖ ಯಾವುದು ಎಂಬ ಬಗ್ಗೆ ವಿರೋಧ ಪಕ್ಷಗಳಲ್ಲಿ ಚರ್ಚೆ ನಡೆಯುತ್ತಿದೆ. ಇದರ ನಡುವೆ ಈಗ ಪ್ರಶಾಂತ್ ಕಿಶೋರ್ ಮತ್ತು ಪವಾರ್ ಅವರ ಈ ಸಭೆ ಮುಖ್ಯವಾದದ್ದು ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆಗೂಡಿ ಸರ್ಕಾರವನ್ನು ನಡೆಸುತ್ತಿರುವ ಶಿವಸೇನೆ ನಾಯಕ ಸಂಜಯ್ ರೌತ್ ಕೆಲವು ದಿನಗಳ ಹಿಂದೆ ವಿರೋಧ ಪಕ್ಷಗಳ ಒಕ್ಕೂಟವನ್ನು ರಚಿಸಲು ರಾಷ್ಟ್ರಮಟ್ಟದಲ್ಲಿ ಮಾತುಕತೆ ಆರಂಭವಾಗಲಿದೆ ಎಂದು ಹೇಳಿದ್ದರು.

ಇಂತಹ ಪರಿಸ್ಥಿತಿಯಲ್ಲಿ, ಪ್ರತಿಪಕ್ಷಗಳಲ್ಲಿ ಮೋದಿ ಮತ್ತು ಬಿಜೆಪಿ ಎದುರು ಯಾವ ಮುಖಗಳು ಎದುರಾಗಬಹುದು ಎಂಬುದರ ಬಗ್ಗೆಯೂ ಚರ್ಚಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್ ಇದುವರೆಗೆ ನರೇಂದ್ರ ಮೋದಿ, ಜಗನ್ ಮೋಹನ್ ರೆಡ್ಡಿ, ಕ್ಯಾಪ್ಟನ್ ಅಮರಿಂದರ್ ಸಿಂಗ್, ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಅವರ ಪಕ್ಷದ ಚುನಾವಣಾ ತಂತ್ರಜ್ಞರಾಗಿ ಕೆಲಸ ಮಾಡಿದ್ದಾರೆ. ಈಗ ಶರದ್ ಪವಾರ್ ಅವರ ಭೇಟಿಯ ನಂತರ ಯಾವೆಲ್ಲ ರಾಜಕೀಯ ಬೆಳವಣಿಗೆಯಾಗಬಹುದು ಎಂಬುದನ್ನು ನೋಡಬೇಕು.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...