ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲದೆ ರಾಷ್ಟ್ರಮಟ್ಟದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ ಈ ಎಲ್ಲದರ ಮಧ್ಯೆ ಪ್ರಜ್ವಲ್ ರೇವಣ್ಣ ಹೊರದೇಶಕ್ಕೆ ತೆರಳಿರುವುದು ಇನ್ನೂ ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಎಲ್ಲದರ ಮಧ್ಯೆ ಕುಮಾರಸ್ವಾಮಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ಮೇಲೆ ಸ್ಫೋಟಕ ಆರೋಪ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣ ಇದ್ದಾರೆ, ಅದು ಒಂದು ಭಾಗ. ಮತ್ತೊಂದು ಕಡೆ ಈ ಪೆನ್ ಡ್ರೈವ್ ಗಳನ್ನು ಹರಿಬಿಟ್ಟವರು ಯಾರು. ಇದರ ಹಿಂದೆ ಇರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ಕೂಡ ತನಿಖೆಯಾಗಬೇಕು ಎಂದು ಹೆಚ್.ಡಿ.ಕೆ ತೀಕ್ಷ್ಣವಾಗಿ ಆರೋಪ ಮಾಡಿದ್ದಾರೆ.
ಈ ಹಿಂದೆ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲೂ, ಖುದ್ದು ರಮೇಶ್ ಜಾರಕಿಹೊಳಿ ಇದೇ ಮಹಾನಾಯಕನ ಮೇಲೆ ಆರೋಪ ಮಾಡಿದ್ದರು. ಇದೀಗ ಸ್ವತಃ ಕುಮಾರಸ್ವಾಮಿ ಕೂಡ ಮಹಾನ್ ನಾಯಕ ಎಂಬ ಅದೇ ಪದ ಬಳಸಿರೋದು ತೀವ್ರ ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.