• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

ಮಲೇಷ್ಯಾದ 'ಪೆನಾಂಗ್' ರಾಜ್ಯದ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಜೊತೆ ಮಹತ್ವದ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
January 6, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

– ಸೆಮಿಕಂಡಕ್ಟರ್ ಯಶಸ್ಸಿನಲ್ಲಿ ‘ಪೆನಾಂಗ್ ವಿವಿ’ ಪಾತ್ರದ ಬಗ್ಗೆ ಮೆಚ್ಚುಗೆ; ಉದ್ಯಮ-ಸಂಶೋಧನಾ ಮಾದರಿ ಅಳವಡಿಕೆಗೆ ಚರ್ಚೆ
– ರಾಜ್ಯದ ‘ತ್ಯಾಜ್ಯದಿಂದ ಸಂಪತ್ತು’ (ಕೆ.ಸಿ ಮತ್ತು ಎಚ್.ಎನ್ ವ್ಯಾಲಿ) ಯೋಜನೆಗಳ ಯಶಸ್ಸನ್ನು ವಿವರಿಸಿದ ಸಚಿವ ಭೋಸರಾಜು
– ಸಂಶೋಧನಾ ಕೇಂದ್ರಗಳ ವೀಕ್ಷಣೆಗಾಗಿ ಮಲೇಷ್ಯಾ ಭೇಟಿ ನೀಡಲು ಸಚಿವರಿಗೆ ಆಹ್ವಾನ

ADVERTISEMENT

ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. “ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ’ (Industry-Research Collaboration). ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು (Penang University) ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ,” ಎಂದು ಅವರು ತಿಳಿಸಿದರು. ಇದೇ ಮಾದರಿಯನ್ನು ಕರ್ನಾಟಕ ಮತ್ತು ಪೆನಾಂಗ್ ನಡುವೆ ವಿಸ್ತರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚರ್ಚೆಯ ವೇಳೆ ಸಚಿವ ಎನ್.ಎಸ್. ಭೋಸರಾಜು ಅವರು ಸಣ್ಣ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಮೈಲಿಗಲ್ಲುಗಳನ್ನು ಪರಿಚಯಿಸಿದರು. ವಿಶೇಷವಾಗಿ ರಾಜ್ಯದ ‘ತ್ಯಾಜ್ಯದಿಂದ ಸಂಪತ್ತು’ (Waste to Wealth) ಪರಿಕಲ್ಪನೆಯಡಿ ಜಾರಿಗೆ ತಂದಿರುವ ಕೆ.ಸಿ. ವ್ಯಾಲಿ (ಕೋರಮಂಗಲ-ಚಲ್ಲಘಟ್ಟ) ಮತ್ತು ಎಚ್.ಎನ್. ವ್ಯಾಲಿ (ಹೆಬ್ಬಾಳ-ನಾಗವಾರ) ಯೋಜನೆಗಳ ಬಗ್ಗೆ ಗಮನ ಸೆಳೆದರು.

“ನಗರದ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅದನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳ ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಯಶಸ್ವಿಯಾಗಿ ಹೆಚ್ಚಿಸಿದ್ದೇವೆ. ಕೃಷಿ ಚಟುವಟಿಕೆಗಳಿಗೆ ಇದು ಜೀವ ತುಂಬಿದೆ,” ಎಂದು ಸಚಿವರು ನಿಯೋಗಕ್ಕೆ ವಿವರಿಸಿದರು. ಈ ಸುಸ್ಥಿರ ಅಭಿವೃದ್ಧಿ ಮಾದರಿಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಕರ್ನಾಟಕ ಸರ್ಕಾರ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರೂಪಿಸಿರುವ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಆಕ್ಷನ್ ಪ್ಲಾನ್’ ನಲ್ಲಿ ಭಾಗಿಯಾಗಲು ಪೆನಾಂಗ್ ನಿಯೋಗ ಉತ್ಸುಕತೆ ತೋರಿತು. “ಪೂರ್ವದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಪೆನಾಂಗ್ ಜೊತೆಗಿನ ಸಹಭಾಗಿತ್ವಕ್ಕೆ ನಮ್ಮ ಸರ್ಕಾರ ಮುಕ್ತವಾಗಿದೆ,” ಎಂದು ಸಚಿವರು ಸ್ವಾಗತಿಸಿದರು. ಬೆಂಗಳೂರು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಹಾಗೂ ಪೆನಾಂಗ್ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯ ಸಮ್ಮಿಲನದಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಉಭಯ ನಾಯಕರು ಅಭಿಪ್ರಾಯವ್ಯಕ್ತಪಡಿಸಿದರು.

ಸಭೆಯ ಅಂತ್ಯದಲ್ಲಿ, ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಅವರು ಸಚಿವ ಭೋಸರಾಜು ಅವರಿಗೆ ಮಲೇಷ್ಯಾ ಮತ್ತು ಪೆನಾಂಗ್‌ಗೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಿದರು. ವಿಶೇಷವಾಗಿ ಪೆನಾಂಗ್‌ನ ವಿಶ್ವವಿದ್ಯಾಲಯದ ಸಂಶೋಧನಾ ಸೌಲಭ್ಯಗಳು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಖುದ್ದಾಗಿ ವೀಕ್ಷಿಸಿ, ಮಾನವ ಸಂಪನ್ಮೂಲ ಅಭಿವೃದ್ಧಿ ಒಪ್ಪಂದವನ್ನು (MoU) ಅಂತಿಮಗೊಳಿಸಲು ಈ ಭೇಟಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳಾ, ಕೆ-ಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಸೇರಿದಂತೆ ಪೆನಾಂಗ್ ರಾಜ್ಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Industry-Research CollaborationIT-BTjagadeep Singh dioN ManjulaNN BosarajuPenangPenang UniversitySadashiva Prabhu
Previous Post

ಐಕ್ಯತೆ ಸಾರುವ ಶ್ರೀ ಗವಿಸಿದ್ದೇಶ್ವರ ಜಾತ್ರೆ: ಬಸವರಾಜ ಬೊಮ್ಮಾಯಿ

Next Post

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada